Saturday, May 17, 2025

ರಾಷ್ಟ್ರದ ಹಿತಾಸಕ್ತಿ ವಿಚಾರದಲ್ಲಿ ಜವಬ್ದಾರಿ ನೀಡಿರುವುದು ಗೌರವದ ಸಂಗತಿ: ಶಶಿ ತರೂರ್​

ದೆಹಲಿ: ಪಾಕಿಸ್ತಾನದ ಭಯೋತ್ಪಾದನೆಯ ಕುರಿತು ಮಾಹಿತಿ ರವಾನಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು. ತಲಾ 5 ಸದಸ್ಯರನ್ನು ಒಳಗೊಂಡಿರುವ 5-6 ನಿಯೋಗಳನ್ನು ವಿವಿಧ ದೇಶಗಳಿಗೆ ರವಾನಿಸಲು ನಿರ್ಧರಿಸಲಾಗಿದೆ. ಇದರ ನೇತೃತ್ವವನ್ನು ಕಾಂಗ್ರೆಸ್​ ನಾಯಕ ಶಶಿ ತರೂರ್​ ಅವರಿಗೆ ನೀಡಲಾಗಿದ್ದು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ತರೂರ್​ ದೇಶದ ಹಿತಾಸಕ್ತಿ ವಿಚಾರದಲ್ಲಿ ನನಗೆ ಜವಬ್ದಾರಿ ನೀಡಿರುವುದು ಗೌರವದ ಸಂಗತಿ ಎಂದು ಹೇಳಿದ್ದಾರೆ.

ರಾಜತಾಂತ್ರಿಕ ಕಾರ್ಯಾಚರಣೆಯ ಭಾಗವಾಗಿ ವಿವಿಧ ಪಕ್ಷಗಳ ಏಳು ಸಂಸದರ ನೇತೃತ್ವದ ನಿಯೋಗಗಳನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದ್ದು, ತಲಾ 5 ಸಂಸದರನ್ನು ಒಳಗೊಂಡ 5-6 ಸಂಸದರ ನೇತೃತ್ವದ ನಿಯೋಗವೊಂದನ್ನು ವಿಶ್ವದ ವಿವಿಧ ದೇಶಗಳಿಗೆ ರವಾನಿಸಲು ನಿರ್ಧರಿಸಲಾಗಿದೆ, ಈ ಸರ್ವಪಕ್ಷದ ನೇತೃತ್ವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ನೀಡಿದೆ. ಇದನ್ನೂ ಓದಿ :ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡುತ್ತಿದ್ದ ಹರಿಯಾಣದ ವಿದ್ಯಾರ್ಥಿ ಬಂಧನ

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಶಶಿ ತರೂರ್ ಅವರು, “ಇತ್ತೀಚಿನ ಘಟನೆಗಳ ಕುರಿತು ನಮ್ಮ ರಾಷ್ಟ್ರದ ದೃಷ್ಟಿಕೋನವನ್ನು ಪ್ರಸ್ತುತಪಡಿಸಲು ಐದು ಪ್ರಮುಖ ರಾಷ್ಟ್ರಗಳಿಗೆ ಸರ್ವಪಕ್ಷ ನಿಯೋಗವನ್ನು ಮುನ್ನಡೆಸಲು ಭಾರತ ಸರ್ಕಾರ ನನಗೆ ಆಹ್ವಾನ ನೀಡಿರುವುದು ನನಗೆ ಗೌರವ ತಂದಿದೆ. ಸರ್ಕಾರ ತೆಗೆದುಕೊಂಡ ನಿರ್ಧಾರದಲ್ಲಿ ರಾಷ್ಟ್ರದ ಹಿತಾಸಕ್ತಿ ಇರುವಾಗ, ಅದರಲ್ಲಿ ನನ್ನ ಸೇವೆ ಅಗತ್ಯವಿರುವಾಗ ಅದರಲ್ಲಿ ಲೋಪಗಳನ್ನು ಹುಡುಕುವುದಿಲ್ಲ. ಜೈ ಹಿಂದ್ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ :ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡುತ್ತಿದ್ದ ದೇಶದ್ರೋಹಿ ಯುಟ್ಯೂಬರ್ ಬಂಧನ

ಆಪರೇಷನ್ ಸಿಂಧೂರ್ ನಂತರ ಕೇಂದ್ರ ಸರ್ಕಾರವನ್ನು ಹೊಗಳಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್, ತಮ್ಮ ಪಕ್ಷದಲ್ಲೇ ಟೀಕೆಗೆ ಒಳಗಾಗಿದ್ದರು. ಇದೀಗ ಅವರು ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ಭಾರತದ ಬಲವಾದ ಸಂದೇಶವನ್ನು ಜಗತ್ತಿಗೆ ಸಾರಲು ಸರ್ವಪಕ್ಷ ನಿಯೋಗದ ನೇತೃತ್ವ ವಹಿಸಲಿದ್ದಾರೆ.

RELATED ARTICLES

Related Articles

TRENDING ARTICLES