Monday, May 19, 2025

ಭೀಕರ ಅಪಘಾತ: KSRTC ಬಸ್ ಉರುಳಿ ಬಿದ್ದು ಸಬ್​ ಇನ್ಸ್​ಪೆಕ್ಟರ್​ ಸಾ*ವು, ಹಲವರಿಗೆ ಗಾಯ

ರಾಮನಗರ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್​ಆರ್​ಟಿಸಿ ಬಸ್​ ಬೈಕ್​ಗಳಿಗೆ ಡಿಕ್ಕಿಯಾಗಿ ಹಳ್ಳಕ್ಕೆ ಉರುಳಿದ್ದು. ಪರಿಣಾಮ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್​ನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯವಾಗಿವೆ.

ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರ ಪೊಲೀಸ್ ಠಾಣೆ ಸಮೀಪ ಘಟನೆ ಅಪಘಾತ  ಸಂಭವಿಸಿದ್ದು. ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕೆಎಸ್​ಆರ್​ಟಿಸಿ ಎರಡು ಬೈಕ್​ಗಳಿಗೆ ಗುದ್ದಿ ಹಳ್ಳಕ್ಕೆ ಉರುಳಿದೆ. ಘಟನೆಯಲ್ಲಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಬ್ ಇನ್ಸ್‌ಪೆಕ್ಟರ್ ನಾಗರಾಜು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ:ಭಾರೀ ಮಳೆಗೆ ರಾಜಧಾನಿ ತತ್ತರ: ಸಿಸಿಬಿ ಕಛೇರಿಗೆ ನೀರು ನುಗ್ಗಿ ಅವಾಂತರ, ಈಜೀಪುರದಲ್ಲಿ ಈಜಾಡೋ ಪರಿಸ್ಥಿತಿ

ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES