Monday, May 19, 2025

ಮಹಾ ಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳೆ ಸಾ*ವು

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದು. ಕಾಂಪೌಂಡ್​ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ಮಹಿಳೆಯನ್ನು 35 ವರ್ಷದ ಶಶಿಕಲಾ ಎಂದು ಗುರುತಿಸಲಾಗಿದೆ.

ಕಳೆದ ರಾತ್ರಿ (ಮೇ.19) ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಬೆಂಗಳೂರು ಅಕ್ಷರಶಃ ತತ್ತರಿಸಿದ್ದು. ಮಹದೇವಪುರದ ಚನ್ನಸಂದ್ರದಲ್ಲಿ ಕಾಂಪೌಂಡ್​ ಕುಸಿದು ಶಶಿಕಲಾ ಎಂಬ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.  ಮೂಲತಃ ಶಹಾಪುರದ ಶಶಿಕಲಾ ಇಂದು ಬೆಳಗ್ಗೆ ವೈಟ್ ಫೀಲ್ಡ್‌ನ ಖಾಸಗಿ ಕಂಪನಿಯಲ್ಲಿ ಹೌಸ್ ಕೀಪಿಂಗ್ ಕೆಲಸಕ್ಕೆ ಹೋದಾಗ ದುರ್ಘಟನೆ ನಡೆದಿದೆ. ಇದನ್ನೂ ಓದಿ :ಭೀಕರ ಅಪಘಾತ: KSRTC ಬಸ್ ಉರುಳಿ ಬಿದ್ದು ಸಬ್​ ಇನ್ಸ್​ಪೆಕ್ಟರ್​ ಸಾ*ವು, ಹಲವರಿಗೆ ಗಾಯ

ಕೆಲಸದ ಸ್ಥಳದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಶಶಿಕಲಾ ಸಾವನ್ನಪ್ಪಿದ್ದಾರೆ. ಇಡೀ ರಾತ್ರಿ ಮಳೆಗೆ ಗೋಡೆ ನೆನೆದಿದ್ದರಿಂದ ಕುಸಿದು ಶಶಿಕಲಾ ಮೇಲೆ ಬಿದ್ದಿದೆ. ಘಟನೆಯ ಪರಿಣಾಮ ಶಶಿಕಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಸಾಯಿ ಲೇಔಟ್‌ಗೆ ಜಲದಿಗ್ಭಂದನ: ಜೆಸಿಬಿ ಮೂಲಕ ಸ್ಥಳೀಯರಿಗೆ ಆಹಾರ ವಿತರಣೆ

ಸದ್ಯ ವೈಟ್‌ಫೀಲ್ಡ್ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಯಾದಗಿರಿಯ ಶಹಾಪುರ ಮೂಲದ ಶಶಿಕಲಾ ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಮೃತ ಶಶಿಕಲಾಗೆ ಇಬ್ಬರು ಸಣ್ಣ ಮಕ್ಕಳಿದ್ದು, ಗಂಡ ಕೂಡ ಕೂಲಿ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಮಹದೇವಪುರ ಪೊಲೀಸರು, ಡಿಸಿಪಿ ಶಶಿಕುಮಾರ್ ಗುಣಾರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES