ದೆಹಲಿ: ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ರಾಂಪುರದಲ್ಲಿ ಉದ್ಯಮಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಗಾಗಿ ಗಡಿಯಾಚೆಗಿನ ಕಳ್ಳಸಾಗಣೆ ಮತ್ತು ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಬಂಧಿತ ಆರೋಪಿಯನ್ನು ಶಹಬಾಜ್ ಎಂದು ಗುರುತಿಸಲಾಗಿದೆ.
ಶೆಹಬಾಜ್ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಏಜೆಂಟರಿಗೆ ನೀಡುತ್ತಿದ್ದ. ಅಷ್ಟೇ ಅಲ್ಲದೇ ಹಲವು ಭಾರಿ ಪಾಕಿಸ್ತಾನಕ್ಕೆ ಪ್ರಯಾಣಿಸಿದ್ದ ಈತ ಸೌಂದರ್ಯವರ್ಧಕಗಳು, ಬಟ್ಟೆಗಳು, ಮಸಾಲೆಗಳು ಮತ್ತು ಇತರ ವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಈತನನ್ನು ಉತ್ತರ ಪ್ರದೇಶದ ವಿಶೇಷ ತನಿಖಾ(ಎಸ್‌ಟಿಎಫ್) ತಂಡ ಬಂಧಿಸಿ ತನಿಖೆಗೆ ಒಳಪಡಿಸಿದೆ. ಇದನ್ನೂ ಓದಿ:ಮುಂಜಾಗ್ರತೆ ತಗೋಬೇಕಿತ್ತು, ಡಿಸಿಎಂ ಡಿಕೆಶಿ ನೋಡಿಕೊಳ್ತಾರೆ: ಪರಮೇಶ್ವರ್
ಭಾರತದಲ್ಲಿರುವ ಐಎಸ್‌ಐ ಏಜೆಂಟ್‌ಗಳಿಗೆ ಶಹಜಾದ್ ಹಣ ಮತ್ತು ಭಾರತೀಯ ಸಿಮ್ ಕಾರ್ಡ್‌ಗಳನ್ನು ಒದಗಿಸುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಆತ ರಾಂಪುರ ಜಿಲ್ಲೆ ಮತ್ತು ಉತ್ತರ ಪ್ರದೇಶದ ಇತರ ಭಾಗಗಳಿಂದ ಜನರನ್ನು ಐಎಸ್‌ಐಗಾಗಿ ಕೆಲಸ ಮಾಡಲು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದ ಎಂದು ಎಸ್‌ಟಿಎಫ್ ಹೇಳಿಕೊಂಡಿದೆ. ಇದನ್ನೂ ಓದಿ:ಭಾರೀ ಮಳೆಗೆ ರಾಜಧಾನಿ ತತ್ತರ: ಸಿಸಿಬಿ ಕಛೇರಿಗೆ ನೀರು ನುಗ್ಗಿ ಅವಾಂತರ, ಈಜೀಪುರದಲ್ಲಿ ಈಜಾಡೋ ಪರಿಸ್ಥಿತಿ
ಕಳೆದ ಕೆಲವು ದಿನಗಳ ಹಿಂದೆ ಹರಿಯಾಣ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಎಂಬಾಕೆಯನ್ನ ಗುಪ್ತಚರ ಇಲಾಖೆ ಅಧಿಕಾರಿಗಳು ಬಂದಿಸಿದ್ದರು. ಈಕೆ ಪಾಕಿಸ್ತಾನಕ್ಕೆ ಭಾರತದ ಸೂಕ್ಷ್ಮ ಮಾಹಿತಿಗಳನ್ನು ಕಳಿಸುತ್ತಿದ್ದಳು ಎಂದು ಆರೋಪಿಸಲಾಗಿದೆ. ಈಕೆಯೆ ಜೊತೆಗೆ ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸುತ್ತಿದ್ದ 6 ಜನರನ್ನು ಬಂಧಿಸಿದ್ದರು.