Saturday, August 23, 2025
Google search engine
HomeUncategorizedಸಿಂಗಾಪುರ-ಹಾಂಕಾಂಗ್​ನಲ್ಲಿ ಕೋವಿಡ್ ಹೆಚ್ಚಳ: ಭಾರತದಲ್ಲೂ 257 ಪ್ರಕರಣಗಳು ಪತ್ತೆ

ಸಿಂಗಾಪುರ-ಹಾಂಕಾಂಗ್​ನಲ್ಲಿ ಕೋವಿಡ್ ಹೆಚ್ಚಳ: ಭಾರತದಲ್ಲೂ 257 ಪ್ರಕರಣಗಳು ಪತ್ತೆ

ದೆಹಲಿ: ಸಿಂಗಾಪುರ ಮತ್ತು ಹಾಂಕಾಂಗ್​ ದೇಶಗಳಲ್ಲಿ ಇತ್ತೀಚೆಗೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇದರ ಬೆನ್ನಲ್ಲೇ ಭಾರತ ಸರ್ಕಾರ ಎಚ್ಚೆತ್ತುಕೊಂಡಿದ್ದು. ಆರೋಗ್ಯ ಸೇವೆಗಳ ಮಹಾನಿರ್ದೇಶಕರ (ಡಿಜಿಹೆಚ್‌ಎಸ್) ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದ್ದು. ಈ ಸಭೆಯಲ್ಲಿ ದೇಶದಲ್ಲಿ ಕೋವಿಡ್​ ಪ್ರಕರಣಗಳ ಸಂಖ್ಯೆ 257 ಇದ್ದು. ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

2021ರಲ್ಲಿ ಇಡೀ ಜಗತ್ತನ್ನು ಕಾಡಿದ್ದ ಕೊರೊನಾ ಮಹಾಮಾರಿ ಸಂಖ್ಯೆ ಸಿಂಗಪೂರ ಮತ್ತು ಹಾಂಕಾಂಗ್​ನಲ್ಲಿ ಹೆಚ್ಚಳವಾಗಿದ್ದು. ಇದರಿಂದ ಹೆಚ್ಚೆತ್ತುಕೊಂಡಿರುವ ಭಾರತ ಸರ್ಕಾರ ತುರ್ತು ಸಭೆ ನಡೆಸಿದೆ. ಭಾರದಲ್ಲಿ ಪ್ರಸ್ತುತ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಇದ್ದು. ಸೋಂಕಿತ ಪ್ರಕರಣಗಳು ನಿಯಂತ್ರಣದಲ್ಲಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ :15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಅಪ್ರಾಪ್ತರ ಬಂಧನ

ಆರೋಗ್ಯ ಸೇವೆಗಳ ಮಹಾನಿರ್ದೇಶಕರ (ಡಿಜಿಹೆಚ್‌ಎಸ್) ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ, ತುರ್ತು ವೈದ್ಯಕೀಯ ಪರಿಹಾರ (ಇಎಂಆರ್) ವಿಭಾಗ, ವಿಪತ್ತು ನಿರ್ವಹಣಾ ಕೋಶ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಕೇಂದ್ರ ಸರ್ಕಾರಿ ಆಸ್ಪತ್ರೆಗಳ ತಜ್ಞರ ಪರಿಶೀಲನಾ ಸಭೆಯ ನಂತರ ಈ ಹೇಳಿಕೆ ಬಂದಿದೆ.

ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ “ಸಿಂಗಾಪುರ ಮತ್ತು ಹಾಂಕಾಂಗ್​ನಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾದ ನಂತರ ಭಾರತವು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಲಭ್ಯವಿರುವ ಮಾಹಿತಿ ಪ್ರಕಾರ, ಭಾರತದಲ್ಲಿರುವ ಬಹುತೇಕ ಪ್ರಕರಣಗಳು ಸೌಮ್ಯವಾಗಿವೆ, ತೀವ್ರವಾಗುವ ಯಾವ ಲಕ್ಷಣಗಳೂ ಗೋಚರಿಸುವುದಿಲ್ಲ. ದೇಶದ ದೊಡ್ಡ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಆಲೋಚಿಸಿದರೆ ಭಾರತದಲ್ಲಿ ಪ್ರಸ್ತುತ ಪ್ರಕರಣಗಳ ಸಂಖ್ಯೆ ತೀರಾ ಕಡಿಮೆ ಎಂದು ಹೇಳಲಾಗಿದೆ. ಇದನ್ನೂ ಓದಿ :ಪಹಲ್ಗಾಂ ದಾಳಿಗೆ ಮೋದಿನೇ ಕಾರಣ: ಮಲ್ಲಿಕಾರ್ಜುನ್​ ಖರ್ಗೆ

ಕೇರಳ, ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಪ್ರಕರಣಗಳ ಪ್ರಮಾಣ ಹೆಚ್ಚಿದೆ. ಕಳೆದ ವಾರದಲ್ಲಿ ಕೇರಳದಲ್ಲಿ 69 ಹೊಸ ಪ್ರಕರಣಗಳು, ಮಹಾರಾಷ್ಟ್ರದಲ್ಲಿ 44 ಮತ್ತು ತಮಿಳುನಾಡು 34 ಹೊಸ ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿಯೂ ಎರಡು ಸಾವುಗಳು ವರದಿಯಾಗಿವೆ, ವೈದ್ಯರ ಪ್ರಕಾರ, ಇವು ಕೋವಿಡ್ -19 ಸಾವುಗಳಲ್ಲ, ಆದರೆ ಇಬ್ಬರೂ ರೋಗಿಗಳು ಕೋವಿಡ್ -19 ಪಾಸಿಟಿವ್ ಎಂದು ಕಂಡುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments