ಬೆಳಗಾವಿ : ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು. ವಾರದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಳಗಾವಿ ಹೊರ ವಲಯದ ರೆಸಾರ್ಟ್ನಲ್ಲಿ ಘಟನೆ ನಡೆದಿದ್ದು. ಸಾಕೀಬ್ ಎಂಬಾತ ಸೇರಿದಂತೆ ಇಬ್ಬರು ಅಪ್ರಾಪ್ತರು ಸೇರಿಕೊಂಡು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಆರೋಪಿ ಸಾಕಿಬ್ ತನ್ನ ಹೆಸರಲ್ಲಿ ರೆಸಾರ್ಟ್ವೊಂದರಲ್ಲಿ ರೂಂ ಬುಕ್ ಮಾಡಿದ್ದನು. ಬಾಲಕಿಯ ಸ್ನೇಹಿತ ಆಕೆಯನ್ನು ಆ ರೂಂಗೆ ಕರೆದುಕೊಂಡು ಹೋಗಿದ್ದನು. ಈ ವೇಳೆ ರೂಮ್ನಲ್ಲಿ ಬಾಲಕಿಯ ಮೇಲೆ ಮೂವರು ಅತ್ಯಾಚಾರ ಎಸೆಗಿದ್ದಾರೆ.
ಇದನ್ನೂ ಓದಿ :ಜನ ಸಾಯ್ತಿದ್ದಾರೆ, ಕಾಂಗ್ರೆಸ್ ಅವರು ಪಂಚೆ ಎತ್ಕೊಂಡು ಸಮಾವೇಶಕ್ಕೆ ಹೋಗಿದ್ದಾರೆ: ಆರ್.ಅಶೋಕ್
ಬಾಲಕಿ ಮನೆಗೆ ವಾಪಾಸ್ ಆದಾಗ ತನ್ನ ತಾಯಿಯ ಬಳಿ ಹೊಟ್ಟೆ ನೋವು ಎಂದು ಹೇಳಿಕೊಂಡಿದ್ದು. ಬಾಲಕಿಯ ತಾಯಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಇನ್ನು ಘಟನೆ ಸಂಬಂಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು. ಪೊಲೀಸರು ಸಾಕೀಬ್ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಮತ್ತೋರ್ವ ಬಾಲಕ ಸ್ಥಳದಿಂದ ಓಡಿಹೋಗಿದ್ದು ಆತನಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ.