ಬೀದರ್ : ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಕಂದಕಕ್ಕೆ ಉರುಳಿ ಉರುಳಿದ್ದು. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಾಯವಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.
ಬೀದರ್ ಜಿಲ್ಲೆಯ, ಔರಾದ್ ತಾಲೂಕಿನ, ಜಮಲಾಪುರ ಕ್ರಾಸ್ ಬಳಿ ಘಟನೆ ಸಂಭವಿಸಿದ್ದು. ಔರಾದ್‌ನಿಂದ ಕಮಲನಗರಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಬೆಳಿಗ್ಗೆ ಸುಮಾರು 8 ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ :ಗೃಹ ಸಚಿವ ಪರಮೇಶ್ವರ್ ಅವರ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ..!
ಎದುರಿಗೆ ಬರುತ್ತಿದ್ದ ಟೆಂಪೋ ಜೊತೆ ಸಂಭವಿಸುವ ಅಪಘಾತವನ್ನು ತಪ್ಪಿಸಲು ಮುಂದಾದಾಗ ಅಪಘಾತ ಸಂಭವಿದೆ. ಬಸ್ ಪ್ರಯಾಣ ಮಾಡುತ್ತಿದ್ದ ಒಟ್ಟು 9 ಪ್ರಯಾಣಿಕರ ಪೈಕಿ ಇಬ್ಬರಿಗೆ ಗಾಯವಾಗಿದ್ದು. ಗಾಯಾಳುಗಳನ್ನು ಔರಾದ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ದೊಡ್ಡ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.