ಅನೇಕಲ್: ಸೂಟ್ಕೇಸ್ನಲ್ಲಿ ಅಪರಿಚಿತ ಬಾಲಕಿ ಶವ ಪತ್ತೆಯಾಗಿರುವ ಘಟನ ಬೆಂಗಳೂರು ಹೊರವಲಯದ ಚಂದಾಪುರದಲ್ಲಿ ನಡೆದಿದೆ. ಯಾರೋ ಕಿಡಿಗೇಡಿಗಳು ಬಾಲಕಿಯ ಕೊಲೆ ಮಾಡಿ ಸೂಟ್ಕೇಸ್ನಲ್ಲಿ ತುಂಬಿ ಎಸೆದು ಹೋಗಿದ್ದಾರೆ.
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರದ ಬಳಿ ಇರುವ ರೈಲ್ವೆ ಬ್ರಿಡ್ಜ್ ಬಳಿ ಸೂಟ್ಕೇಸ್ ಪತ್ತೆಯಾಗಿದ್ದು. ಸುಮಾರು 10 ವರ್ಷ ವಯಸ್ಸಿನ ಬಾಲಕಿ ಶವ ಸೂಟ್ಕೇಸ್ನಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಸೂರ್ಯನಗರ ಪೊಲೀಸ್ ಠಾಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಶವವನ್ನು ಶವಗಾರಕ್ಕೆ ಕಳುಹಿಸಿದ್ದಾರೆ. ಇದನ್ನೂ ಓದಿ :ಸಿಟಿ ರೌಂಡ್ಸ್ ಮಾಡುವ ವೇಳೆ ಸಿಎಂರನ್ನು ತರಾಟೆಗೆ ತೆಗೆದುಕೊಂಡ ಸಾಯಿ ಲೇಔಟ್ ನಿವಾಸಿಗಳು..!
ಚಲಿಸುತ್ತಿದ್ದ ರೈಲಿನಿಂದ ಸೂಟ್ಕೇಸ್ನ್ನು ಹೊರಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದ್ದು. ರೈಲ್ವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ದೊರಕಬೇಕಿದೆ