ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ದ ಅತ್ಯಾಚಾರ ಪ್ರಕರಣ ದಾಖಲಾಗಿದ್ದು. ಮಡೆನೂರು ವಿರುದ್ದ ಸಹ ಕಲಾವಿದೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
ಕಾಮಿಡಿ ಕಿಲಾಡಿಗಳು ಸೀಸನ್ 2ರ ಕಲಾವಿದ ಮಡೆನೂರು ಮನು ವಿರುದ್ದ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಹ ಕಲಾವಿದೆಯೊಬ್ಬರು ರೇಪ್ ಕೇಸ್ ದಾಖಲಿಸಿದ್ದು. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಇನ್ನು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ಈತ ತಲೆ ಮರಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ. ಇದನ್ನೂ ಓದಿ :ತೀವ್ರ ಹೃದಯಘಾತ: 19 ವರ್ಷದ ಯುವಕ-ಯುವತಿ ಸಾ*ವು
ಮಡೆನೂರು ಮನು, ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದರು. ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್ ದಾಖಲಾಗಿದೆ. ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ತಲೆಮರೆಸಿಕೊಂಡಿದ್ದಾನೆ. ಆರೋಪಿ ನಟ ಮಡೆನೂರು ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ :ED ದಾಳಿ ಬಗ್ಗೆ ಪರಂ ಮೊದಲ ರಿಯಾಕ್ಷನ್: ಸಂಪೂರ್ಣ ಸಹಕಾರ ಕೊಡುತ್ತೇವೆ ಎಂದ ಸಚಿವ