ಮೈಸೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ ಹಿನ್ನಲೆ ಸಿಎಂ ಸಿದ್ದರಾಮಯ್ಯ ಮಾಸ್ಕ್ ಧರಿಸಿ ಜನರ ಅಹವಾಲು ಸ್ವೀಕರಿಸಿದ್ದು. ಮುನ್ನೆಚ್ಚರಿಕ ಕ್ರಮವಾಗಿ ಸಿಎಂ ಸಿದ್ದರಾಮಯ್ಯ ಮಾಸ್ಕ್ ಧರಿಸಿ ಜನತಾ ದರ್ಶನದಲ್ಲಿ ಹಾಜರಾಗಿದ್ದಾರೆ.
ಸಿಂಗಾಪುರ, ಹಾಂಕಾಂಗ್‌ನಲ್ಲಿ ತಲ್ಲಣ ಎಬ್ಬಿಸಿರುವ ಕೊರೊನಾ ಹೊಸ ತಳಿ ಈಗ ಕರ್ನಾಟಕದಲ್ಲಿ ನಿಧಾನಕೆ ಏರುಗತಿಯಲ್ಲಿ ಸಾಗುತ್ತಿದೆ. ಮೇ ತಿಂಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಜನವರಿಯಲ್ಲಿ ಮೂರು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಫೆಬ್ರವರಿಯಲ್ಲಿ ಕೇವಲ 1 ಕೇಸ್ ಪತ್ತೆಯಾಗಿತ್ತು. ಮಾರ್ಚ್‌ನಲ್ಲೂ ಮೂರು, ಏಪ್ರಿಲ್ ತಿಂಗಳಲ್ಲೂ ಕೇವಲ 3 ಕೇಸ್‌ಗಳು ದಾಖಲಾಗಿದ್ದವು. ಆದರೆ, ಮೇ ತಿಂಗಳು ಇನ್ನೂ ಮುಗಿದಿಲ್ಲ, ಆಗಲೇ 33 ಪ್ರಕರಣಗಳು ಪತ್ತೆಯಾಗಿವೆ. ಇದನ್ನೂ ಓದಿ :ಮನೆಗೆ ಬಿಡುವುದಾಗಿ ಹೇಳಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಕಾಮುಕ ಸ್ವಾಮೀಜಿ ಅಂದರ್
ಇದರಿಂದ ಎಚ್ಚೆತ್ತಿರುವ ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಟೆಸ್ಟ್ ಹೆಚ್ಚಿಸಲು ಮುಂದಾಗಿದ್ದು. ನಾಳೆಯಿಂದ ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಆರಂಭವಾಗಲಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ನಡೆದ ಜನತಾ ದರ್ಶನಕ್ಕೆ ಮಾಸ್ಕ್ ಧರಿಸಿ ಆಗಮಿಸಿದ್ದು. ಜನರ ಬಳಿ ಖುದ್ದಾಗಿ ತೆರಳಿ ಅಹವಾಲು ಸ್ವೀಕರಿಸಿದ್ದಾರೆ.
ಅಕ್ಕ-ಪಕ್ಕದ ರಾಜ್ಯದಲ್ಲಿ ಕೋವಿಡ್ ಹೆಚ್ಚಾದ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ :ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸ್ಪೋಟ; ರಾಜ್ಯದಲ್ಲಿ ಕೋವಿಡ್ ಟೆಸ್ಟ್ ಆರಂಭಿಸಲು ಸೂಚನೆ
ಈಗಾಗಲೇ ಆಂದ್ರಪ್ರದೇಶ ಮತ್ತು ಕೇರಳ ಸರ್ಕಾರಗಳು ತಮ್ಮ ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಿದ್ದು. ಕರ್ನಾಟಕ ಸರ್ಕಾರ ಕೂಡ ಕೂಡಲೆ ಕಠಿಣ ಕ್ರಮ ಕೈಗೊಳ್ಳಬೇಕಿದೆ. ಸದ್ಯ ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 257ಕ್ಕೆ ಏರಿಕೆ ಆಗಿದ್ದು. ಈ ಪೈಕಿ ಬಹುತೇಕ ಎಲ್ಲಾ ಪ್ರಕರಣಗಳು ಸೌಮ್ಯ ಲಕ್ಷಣ ಹೊಂದಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.