Saturday, May 24, 2025

ರಾಜ್ಯದಲ್ಲಿ ಕೋವಿಡ್​ ಸ್ಪೋಟ; ಕೋವಿಡ್​ ಟೆಸ್ಟ್​ ಆರಂಭಿಸಲು ರಾಜ್ಯ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಎರಡು ವರ್ಷಗಳ ಹಿಂದೆ ಪ್ರಪಂಚವನ್ನ ಅಕ್ಷರಶಃ ಅಲ್ಲಾಡಿಸಿದ್ದ ಕೋವಿಡ್​ ಮತ್ತೆ ಕಾಡಲು ಶುರು ಮಾಡಿದೆ. ಕೊರೊನಾ ವೈರಸ್​​ನ ಹೊಸ ತಳಿ JN.1 ಆತಂಕ ಹುಟ್ಟಿಸುತ್ತಿದ್ದು. ರಾಜ್ಯ ಸರ್ಕಾರವೂ ನಾಳೆಯಿಂದ ಕೋವಿಡ್​ ಟೆಸ್ಟ್​ ಆರಂಭಿಸಲು ಸೂಚನೆ ಹೊರಡಿಸಿದೆ. ರಾಜ್ಯದಲ್ಲಿ ನಿನ್ನೆಯವರೆಗೂ ಸುಮಾರು 35 ಕೋವಿಡ್​ ಸಕ್ರಿಯ ಪ್ರಕರಣಗಳು ದಾಖಲಾಗಿವೆ.

ಸಿಂಗಾಪುರ, ಹಾಂಕಾಂಗ್‌ನಲ್ಲಿ ತಲ್ಲಣ ಎಬ್ಬಿಸಿರುವ ಕೊರೊನಾ ಹೊಸ ತಳಿ ಈಗ ಕರ್ನಾಟಕದಲ್ಲಿ ನಿಧಾನಕೆ ಏರುಗತಿಯಲ್ಲಿ ಸಾಗುತ್ತಿದೆ. ಮೇ ತಿಂಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಜನವರಿಯಲ್ಲಿ ಮೂರು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಫೆಬ್ರವರಿಯಲ್ಲಿ ಕೇವಲ 1 ಕೇಸ್‌ ಪತ್ತೆಯಾಗಿತ್ತು. ಮಾರ್ಚ್‌ನಲ್ಲೂ ಮೂರು, ಏಪ್ರಿಲ್‌ ತಿಂಗಳಲ್ಲೂ ಕೇವಲ 3 ಕೇಸ್‌ಗಳು ದಾಖಲಾಗಿದ್ದವು. ಆದರೆ, ಮೇ ತಿಂಗಳು ಇನ್ನೂ ಮುಗಿದಿಲ್ಲ, ಆಗಲೇ 33 ಪ್ರಕರಣಗಳು ಪತ್ತೆಯಾಗಿವೆ. ಇದನ್ನೂ ಓದಿ :ಮನೆಗೆ ಬಿಡುವುದಾಗಿ ಹೇಳಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಕಾಮುಕ ಸ್ವಾಮೀಜಿ ಅಂದರ್​

ಇದರಿಂದ ಎಚ್ಚೆತ್ತಿರುವ ರಾಜ್ಯ ಆರೋಗ್ಯ ಇಲಾಖೆ ಕೋವಿಡ್​ ಟೆಸ್ಟ್ ಹೆಚ್ಚಿಸಲು ಮುಂದಾಗಿದ್ದು. ನಾಳೆಯಿಂದ ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಆರಂಭವಾಗಲಿದೆ. ಮೆಡಿಕಲ್ ಕಾಲೇಜ್​ಗಳು ಮತ್ತು ಜಿಲ್ಲಾಸ್ಫತ್ರೆಗಳಲ್ಲಿ ಕೊವಿಡ್ ಟೆಸ್ಟ್ ಮಾಡಲು ನಿರ್ಧಾರಿಸಿದ್ದು. ಎಂಟು ಆರ್‌ಟಿಪಿಸಿಆರ್ ಟೆಸ್ಟಿಂಗ್ ಲ್ಯಾಬ್ ಗಳು ಓಪನ್ ಮಾಡಲು ನಿರ್ಧಾರಿಸಲಾಗಿದೆ. ಜೊತೆಗೆ ಗರ್ಬಿಣಿಯರು, ಬಾಣಂತಿಯರು, ಮಕ್ಕಳು, ವೃದ್ದರು ಮುಂಜಾಗೃತ ಕ್ರಮ ವಹಿಸುವಂತೆ ಸೂಚನೆ ಹೊರಡಿಸಲಾಗಿದೆ.

ಇದನ್ನೂ ಓದಿ :KKRTC ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; 18ಕ್ಕೂ ಹೆಚ್ಚು ಜನರಿಗೆ ಗಾಯ

ಭಾರತದಲ್ಲಿ ಸದ್ಯ ಸಕ್ರಿಯ ಕೊವಿಡ್ ಕೇಸ್‌ಗಳ ಸಂಖ್ಯೆ 257 ಇದೆ. ಈ ಪೈಕಿ ಬಹುತೇಕ ಸೋಂಕಿತರು ಸೌಮ್ಯ ಲಕ್ಷಣಗಳನ್ನು ಹೊಂದಿದ್ದು, ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ. ಹೀಗಾಗಿ ಆತಂಕ ಬೇಡ, ಎಚ್ಚರವಿರಲಿ ಸಾಕು ಎಂದು ಕೇಂದ್ರ ಆರೋಗ್ಯ ಇಲಾಖೆ ಸಲಹೆ ನೀಡಿದೆ. ರಾಜ್ಯದಾದ್ಯಂತ ಆಸ್ಪತ್ರೆಗಳಲ್ಲಿ ಇನ್‌ಫ್ಲುಯೆಂಜಾ ಮಾದರಿ ಅನಾರೋಗ್ಯ ಮತ್ತು ತೀವ್ರವಾದ ಉಸಿರಾಟದ ಸೋಂಕುಗಳ ಪ್ರಕರಣಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದೆ.

RELATED ARTICLES

Related Articles

TRENDING ARTICLES