ವಿಜಯಪುರ : ಮದುವೆ ಸಂಭ್ರಮದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಯುವಕನೊಬ್ಬ ಹೃದಯಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದ್ದು. ಮೃತ ಯುವಕನನ್ನು ಮಹಮ್ಮದ್ ಪೈಗಂಬರ್ ಎಂದು ಗುರುತಿಸಲಾಗಿದೆ.
ಇತ್ತೀಚೆಗೆ ಹೃದಯಘಾತದಿಂದ ಸಾವನ್ನಪ್ಪುತ್ತಿರುವವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆರೋಗ್ಯವಾಗಿರುವ ಯುವಕರೇ ಈ ಅಠಾಥ್ ಹೃದಯಘಾತಕ್ಕೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಇದೇ ರೀತಿಯಾಗಿ ವಿಜಯಪುರದಲ್ಲಿ ಯುವಕನೊಬ್ಬ ಹೃದಯಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಇದನ್ನೂ ಓದಿ :ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಶುಭಮನ್ ಗಿಲ್ಗೆ ಸಾರಥ್ಯ, ಮೂವರು ಕನ್ನಡಿಗರಿಗೆ ಅವಕಾಶ
ವಿಜಯಪುರ ನಗರದ ಚಪ್ಪರಬಂದ ಕಾಲೋನಿಯಲ್ಲಿ ಘಟನೆ ನಡೆದಿದ್ದು. ಮಹಮ್ಮದ್ ಪೈಗಂಬರ್ ಎಂಬ ಯುವಕ ಸಂಬಂಧಿಕರ ಮದುವೆಯಲ್ಲಿ ಡಾನ್ಸ್ ಮಾಡುತ್ತಿದ್ದ. ಆದರೆ ಈ ವೇಳೆ ಯುವಕನಿಗೆ ಹೃದಯಘಾತ ಸಂಭವಿಸಿದ್ದು. ಡ್ಯಾನ್ಸ್ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ :ಬಾಳೆಹಣ್ಣಿನ ಆಮಿಷವೊಡ್ಡಿ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊ*ಲೆ
ಕಳೆದ ಎರಡು ದಿನಗಳ ಹಿಂದಷ್ಟೇ ಹಾಸನದಲ್ಲಿ 19 ವರ್ಷದ ಯುವತಿಯೊಬ್ಬರು ಬಾತ್ರೂಂನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದರು. ಜೊತೆಗೆ ಬೆಂಗಳೂರಿನಲ್ಲಿ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ ಯುವಕನೊಬ್ಬ ರಸ್ತೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದನು.