ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮೂರು ವರ್ಷದ ಕಂದಮ್ಮ ಕಣ್ಮುಚ್ಚಿರುವ ಘಟನೆ ಮಂಡ್ಯದಲ್ಲಿ ನಡೆದಿದ್ದು. ಘಟನೆಯಿಂದ ಆಕ್ರೋಶಿತರಾಗಿರುವ ಮಂಡ್ಯದ ಜನರ ನಡುರಸ್ತೆಯಲ್ಲಿ ಪೊಲೀಸರ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಬಾಲಕಿಯ ತಂದೆ ‘ಪರಿಹಾರ ಕೊಡ್ತೀವಿ ಅಂತ ಹೇಳ್ತಾರೆ, ನಾನೇ 10 ಲಕ್ಷ ತಂದು ಕೊಡ್ತೀನಿ ನನ್ನ ಮಗಳನ್ನ ವಾಪಾಸ್ ತಂದು ಕೊಡಿ’ ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ.
ಇದನ್ನೂ ಓದಿ:ಕಾರ್ಗೋಶಿಪ್ ಮುಳುಗಡೆ; ದಡಕ್ಕೆ ತೇಲಿಬಂದ ಕಂಟೇನರ್ಗಳು, ಮುಟ್ಟದಂತೆ ಜನರಿಗೆ ಸೂಚನೆ
ಮಂಡ್ಯದ ಸ್ವರ್ಣಸಂದ್ರ ಬಳಿ ಹೃದಯ ವಿದ್ರಾವಕ ಘಟನೆ ನಡೆದು ಹೋಗಿದೆ. ಹೆಲ್ಮೆಟ್ ತಪಾಸಣೆಯಲ್ಲಿದ್ದ ಪೊಲೀಸರು ಅಡ್ಡಗಟ್ಟಿದಾಗ, ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದ ಮೂರು ವರ್ಷದ ಮಗು ಹೃತೀಕ್ಷ ಸಾವನ್ನಪ್ಪಿದೆ. ಮುದ್ದಾದ ಮಗುವನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು. ಪೋಷಕರ ತಂದೆ ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಗು ಕಳೆದುಕೊಂಡ ನೋವಿನಲ್ಲಿ ಮಾತನಾಡಿರುವ ತಂದೆ, “ಪಾಪುಗೆ ನಾಯಿ ಕಚ್ಚಿತ್ತು. ಮದ್ದೂರಿನಿಂದ ಕರೆದುಕೊಂಡು ಬಂದ್ವಿ. ಇಲ್ಲಿನ ಸರ್ವೀಸ್ ರಸ್ತೆಯಲ್ಲಿ ಗಾಡಿಯನ್ನು ಅಡ್ಡ ಹಾಕಿದ್ದಾರೆ. ಆಗ ಅರ್ಜೆಂಟ್ ಅಲ್ಲಿ ಆಸ್ಪತ್ರೆಗೆ ಹೊರಟಿದ್ವಿ. ಆಗ ಗಾಡಿ ಮೂವ್ ಮಾಡಲು ಕೊಟ್ಟಿಲ್ಲ. ಅವರ ಗಾಡಿ ಅಡ್ಡ ಹಾಕಿದ ಪರಿಣಾಮ ನಮ್ಮ ಬೈಕ್ ಸ್ಕಿಡ್ ಆಗಿದೆ. ಇದನ್ನೂ ಓದಿ:‘ಪೊಲೀಸರಿಗೆ ಮೊದಲೇ ವಾರ್ನ್ ಮಾಡಿದ್ದೇ’; ಮಂಡ್ಯ ದುರ್ಘಟನೆಗೆ ಶಾಸಕ ರವಿ ಗಣಿಗ ತೀವ್ರ ಬೇಸರ
ಸ್ಕಿಡ್ ಆಗಿದ ತಕ್ಷಣ ಮಗು ಬೀಳುತ್ತಿದ್ದಂತೆಯೇ ಬೇರೆ ವಾಹನ ಬಂದು ಪಾಪು ಮೇಲೆ ಹರಿದಿದೆ. ನನ್ನ ಮಗಳ ಜೀವ ತಿನ್ನೋಕೆ ಇವರೇ ಕಾರಣ ಸ್ವಾಮಿ. ಅವರಿಗೆ ಬ್ಯಾಂಡೇಜ್ ಹಾಕಿದ್ದೂ ಕಾಣಿಸಿಲ್ವಾ? ಇವರ ದುಡ್ಡನ್ನು ತಿಂದು ಹೋಗ್ತೀವಾ? ನನ್ನ ಮಗಳಿಗೆ ಪರಿಹಾರ ಕೊಡ್ತಾರಂತೆ. ನಾನೇ ಹತ್ತು ಲಕ್ಷ ಕೊಡ್ತೀನಿ ಸ್ವಾಮಿ ನನ್ನ ಮಗಳ ತಂದು ಕೊಡ್ತೀರಾ? ಎಂದು ಮಗುವಿನ ತಂದೆ ಭಾವುಕರಾಗಿದ್ದಾರೆ.
ಇನ್ನು ಘಟನಾ ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದ್ದು. ಸ್ಥಳದಲ್ಲಿ ಜಮಾಯಿಸಿರುವ ಪ್ರತಿಭಟನಕಾರರು ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೈಕ್ ಅಡಗಟ್ಟಿದ ಪೊಲೀಸರನ್ನು ಸ್ಥಳಕ್ಕೆ ಕರೆಸುವಂತೆ ಆಗ್ರಹಿಸಿದ್ದು. ನ್ಯಾಯ ಸಿಗುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ದೇಶದಲ್ಲಿ 1000ದ ಗಡಿ ದಾಟಿದ ಕೋವಿಡ್ ಪ್ರಕರಣಗಳ ಸಂಖ್ಯೆ: ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ