Thursday, May 29, 2025

ಅರಣ್ಯ ಇಲಾಖೆ ರಾಯಭಾರಿಯಾಗಿ ಅನಿಲ್ ಕುಂಬ್ಳೆ ನೇಮಕ: ಈಶ್ವರ್ ಖಂಡ್ರೆ

ಬೆಂಗಳೂರು: ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ ಇನ್ನು ಮುಂದೆ ಅರಣ್ಯ ಇಲಾಖೆಯ ರಾಯಭಾರಿಯಾಗಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದು. ಈ ಕುರಿತು ಸಚಿವ ಈಶ್ವರ್ ಖಂಡ್ರೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.ಇದನ್ನೂ ಓದಿ :ಆಪರೇಷನ್​ ಸಿಂಧೂರ್ ಸಕ್ಸಸ್​; IPL ಫೈನಲ್​ ಪಂದ್ಯಕ್ಕೆ ಸೇನಾ ಮುಖ್ಯಸ್ಥರಿಗೆ BCCI ಆಹ್ವಾನ

ತಮನ್ನಾ ಭಾಟಿಯಾರನ್ನು ಕೆಎಸ್​ಡಿಎಲ್​ಗೆ ರಾಯಭಾರಿಯಾಗಿ ನೇಮಕ ಮಾಡಿಕೊಂಡ ಬೆನ್ನಲ್ಲೇ ಸ್ಟಾರ್​ ಕ್ರಿಕೆಟಿಗ ಅನಿಲ್​ ಕುಂಬ್ಳೆ ಅರಣ್ಯ ಇಲಾಖೆ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಅನಿಲ್ ಕುಂಬ್ಳೆ ರಾಯಭಾರಿ ಆಗಿರೋ ವಿಚಾರವನ್ನು ಸ್ಪಷ್ಟಪಡಿಸಿದರು. ಅನಿಲ್ ಕುಂಬ್ಳೆ ಅವರು ಅರಣ್ಯ ಇಲಾಖೆ ರಾಯಭಾರಿಯಾಗಲು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.

ಇನ್ನು ಈ ಕುರಿತು ಸಚಿವರು ಟ್ವಿಟ್​ ಮಾಡಿ ಮಾಹಿತಿ ಹಂಚಿಕೊಂಡಿದ್ದು..!

ಅರಣ್ಯ ಮತ್ತು ಪರಿಸರ ಸಂರಕ್ಷಣೆಯ ಹಿತಾಸಕ್ತಿಯಿಂದ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ, ಖ್ಯಾತ ಕ್ರಿಕೆಟಿಗ ಮತ್ತು ಮಾಜಿ ಭಾರತ ತಂಡದ ನಾಯಕರಾದ ಶ್ರೀ ಅನಿಲ್​ ಕುಂಬ್ಳೆ ಅವರನ್ನು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮನಿರ್ದೇಶಿಸಲು ನಿರ್ಧರಿಸಿದ್ದೇವೆ. ಇದನ್ನೂ ಓದಿ :‘ನಾಲಾಯಕ್​ ಜೋಕರ್​ಗಳು ನಮ್ಮ ಜೊತೆ ಯುದ್ದ ಮಾಡ್ತಾರಂತೆ’; ಪಾಕಿಸ್ತಾನವನ್ನ ಟ್ರೋಲ್ ಮಾಡಿದ ಓವೈಸಿ

ಶ್ರೀ ಕುಂಬ್ಳೆ ಅವರು ಇತ್ತೀಚೆಗೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ವನ್ಯಜೀವಿಗಳ ಮೇಲಿನ ಅಪಾರ ಕಾಳಜಿ, ಅರಣ್ಯದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅವರು ಹೊಂದಿರುವ ಖ್ಯಾತಿಯಿಂದಾಗಿ ಅವರು ಈ ಜವಾಬ್ದಾರಿಗೆ ಅತ್ಯಂತ ಸೂಕ್ತ ವ್ಯಕ್ತಿಯಾಗಿದ್ದಾರೆ. ಅವರು ಯಾವುದೇ ಸಂಭಾವನೆ ಪಡೆಯದೇ, ಸಂಪೂರ್ಣವಾಗಿ ಸಮಾಜಮುಖಿ ಉದ್ದೇಶದಿಂದ ಈ ಸೇವೆಗಾಗಿ ಸಮ್ಮತಿಸಿರುವುದು ಹೆಮ್ಮೆಯ ವಿಷಯವಾಗಿದೆ. ಈ ನಿರ್ಧಾರದಿಂದ ನಮ್ಮ ರಾಜ್ಯದ ಅರಣ್ಯ ಸಂರಕ್ಷಣೆ, ವನ್ಯಜೀವಿ ರಕ್ಷಣೆ ಮತ್ತು ಪರಿಸರ ಜಾಗೃತಿಗೆ ಹೊಸ ದಿಕ್ಕು ಮತ್ತು ಚೈತನ್ಯ ದೊರೆಯಲಿದೆ ಎಂಬ ಭರವಸೆ ನನಗಿದೆ ಎಂದು ಸಚಿವರು ಟ್ವಿಟ್​ ಮಾಡಿದ್ದಾರೆ. ಬುರ್ಕಾದಾರಿ ಮಹಿಳೆಗೆ ಮುತ್ತಿಟ್ಟು ಪರಾರಿ; ಯುಪಿ ಪೊಲೀಸರಿಂದ ಆರೋಪಿಗೆ ಲಾಠಿ ರುಚಿಇದನ್ನೂ ಓದಿ:

RELATED ARTICLES

Related Articles

TRENDING ARTICLES