Thursday, May 29, 2025

ಮಂಗಳೂರಿನಲ್ಲಿ ಮತ್ತೆ ಹರಿದ ನೆತ್ತರು; ಓರ್ವ ಸಾ*ವು, ಮತ್ತೊಬ್ಬನ ಸ್ಥಿತಿ ಗಂಭೀರ

ಮಂಗಳೂರು: ಸುಹಾಸ್​ ಶೆಟ್ಟಿ ಹತ್ಯೆ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಮ್ಮೆ ತಲವಾರ್​ಗಳು ತಲೆ ಎತ್ತಿದ್ದು. ಮತ್ತೊಬ್ಬ ಯುವಕನನ್ನ ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾದ ಯುವಕನನ್ನು ಅಬ್ದುಲ್​ ರೆಹಮಾನ್​ ಎಂದು ಗುರುತಿಸಲಾಗಿದೆ.

ಕಳೆದ ಕೆಲ ವಾರಗಳ ಹಿಂದಷ್ಟೇ ಹಿಂದು ಕಾರ್ಯಕರ್ತ ಸುಹಾಸ್​ ಶೆಟ್ಟಿಯನ್ನು ದುಷ್ಕರ್ಮಿಗಳು ನಡು ರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿದ್ದರು. ಸುಹಾಸ್​ ಶೆಟ್ಟಿ ಹತ್ಯೆಯ ನಂತರ ಮಂಗಳೂರು ಸಂಪೂರ್ಣ ಪ್ರಕ್ಷುಬ್ದಗೊಂಡಿತ್ತು. ಎಲ್ಲಡೆ ಪ್ರತಿಕಾರದ ಮಾತುಗಳು ಕೇಳಿ ಬರುತ್ತಿದ್ದವು, ಅಷ್ಟೇ ಅಲ್ಲದೇ ಸುಹಾಸ್​ ಶೆಟ್ಟಿ ಅಂತ್ಯಕ್ರಿಯೆ ನಡೆಯುವ ದಿನವೇ ಮೂನಾಲ್ಕು ಕಡೆ ಕೊಲೆ ಯತ್ನದ ಆರೋಪಗಳು ಕೇಳಿ ಬಂದಿದ್ದವು. ಇದನ್ನೂ ಓದಿ :ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಖ್ಯಾತ ನಟ ಅನಂತ್​ ನಾಗ್​

ಇದರ ನಡುವೆ  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾಕೋಡಿ ಎಂಬಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪಿಕಪ್ ವಾಹನ ಚಾಲಕನನ್ನು ಕೊಲೆ ಮಾಡಲಾಗಿದೆ. ಅಬ್ದುಲ್ ರಹಿಮಾನ್ ಮೃತ ದುರ್ದೈವಿ. ಮರಳು ಅನ್​ಲೋಡ್ ಮಾಡುವಾಗ ಅಬ್ದುಲ್ ರಹಿಮಾನ್​ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.

ಇದನ್ನೂ ಓದಿ :ಆಪರೇಷನ್​ ಸಿಂಧೂರ್ ಸಕ್ಸಸ್​; IPL ಫೈನಲ್​ ಪಂದ್ಯಕ್ಕೆ ಸೇನಾ ಮುಖ್ಯಸ್ಥರಿಗೆ BCCI ಆಹ್ವಾನ

ಇದೇ ವೇಳೆ ಅಬ್ದುಲ್ ರಹಿಮಾನ್ ಜೊತೆಗಿದ್ದ ಕಲಂಧರ್ ಎಂಬುವರ ಮೇಲೂ ದಾಳಿ ಮಾಡಲಾಗಿದ್ದು, ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್​ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES