ದೆಹಲಿ : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರ ವಿರುದ್ಧ ಬಿಜೆಪಿ ಶಿಸ್ತು ಸಮಿತಿ ಕ್ರಮ ತೆಗೆದುಕೊಂಡಿದ್ದು, ಇಬ್ಬರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಇದನ್ನೂ ಓದಿ:ಶ್ರೀಧರ್ ನಾಯಕ್ಗೆ ಏಡ್ಸ್ ಬಂದಿತ್ತು, ಆತನ ಅಹಂಕಾರದಿಂದ ಎಲ್ಲ ಕಳೆದುಕೊಂಡ; ಪತ್ನಿ ಜ್ಯೋತಿ ಆಡಿಯೋ
ಕಳೆದ 2 ತಿಂಗಳ ಹಿಂದೆಷ್ಟೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷಕ್ಕೆ ಮುಜುಗರ ನೀಡುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು. ಇದರ ನಡುವೆ ಶಾಸಕ ಎಸ್,ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಕ್ಕೆ 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ರನ್ನು ಉಚ್ಚಾಟನೆ ನಡೆಸಿದ್ದ ಬಿಜೆಪಿ ಕೇಂದ್ರ ಶಿಸ್ತು ಸಮಿತಿ, ಬಂಡಾಯ ಶಾಸಕರಾದಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಇಬ್ಬರಿಗೂ ಶೋಕಾಸ್ ನೋಟಿಸ್ ನೀಡಿ ಉತ್ತರಿಸುವಂತೆ ಸೂಚಿಸಿತ್ತು. ಆದರೆ ಇದೀಗ ಇಬ್ಬರು ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಈ ಮೊದಲು ಇಬ್ಬರೂ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದರು. 2019ರಲ್ಲಿ ಇಬ್ಬರೂ ಬಿಜೆಪಿ ಸೇರಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕ ಸಚಿವರಾದರೆ, ಸೋಮಶೇಖರ್ ಅವರು ಸಹಕಾರ ಸಚಿವರಾಗಿದ್ದರು.