ಮಂಗಳೂರು: ನಿನ್ನೆ (ಮೇ 27) ಬಂಟ್ವಾಳದ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಅಬ್ದುಲ್ ರಹೀಂ (34)ರ ಮೃತದೇಹ ಸಾಗಾಟದ ವೇಳೆ ಫರಂಗಿಪೇಟೆಯಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಜಮಾಣೆಯಾಗಿದ್ದು. ಉದ್ರಿಕ್ತ ಗುಂಪು ರಸ್ತೆ ತಡೆದು, ಬಸ್ಗಳ ಮೇಲೆ ಕಲ್ಲುತೂರಾಟ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಪಿಕಪ್ ವಾಹನದಲ್ಲಿ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಅಬ್ದುಲ್ ರಹೀಂ ಮತ್ತು ಕಲಂದರ್ ಶಾಫಿ ಮೇಲೆ ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದು, ಅಬ್ದುಲ್ ರಹೀಂ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದನು. ಕಲಂದರ್ ಶಾಹಿ ಗಂಭೀರವಾಗಿ ಗಾಯಗೊಂಡಿದ್ದು. ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ :‘ನಮ್ಮಪ್ಪಂದೆ ಕಾರು, ಏನ್ ಕಿತ್ಕೋತೀಯಾ’; ಅಪ್ಪನ ದುಡ್ಡಲ್ಲಿ ಯುವಕನ ಹುಚ್ಚಾಟ
ಅಬ್ದುಲ್ ರಹೀಂ ಮೃತದೇಹದ ಮರಣೋತ್ತರ ಪರೀಕ್ಷೆ ದೇರಳಕಟ್ಟೆ ಯೆನೆಪೊಯ ಆಸ್ಪತ್ರೆಯಲ್ಲಿ ನಡೆದಿದ್ದು. ಇಂದು ಮುಂಜಾನೆ ಕುತ್ತಾರ್ ಮದನಿ ನಗರದ ಮಸೀದಿಯಲ್ಲಿ ಮಯ್ಯತ್ ಸ್ನಾನ ನಿರ್ವಹಿಸಲಾಯಿತು. ಮಯ್ಯತ್ ನಮಾಝ್ ಬಳಿಕ ಅಲ್ಲಿಂದ ಪೊಲೀಸ್ ಬಂದೋಬಸ್ತ್ ನಲ್ಲಿ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಕೊಂಡೊಯ್ಯಲಾಯಿತು. ಇದನ್ನೂ ಓದಿ :U16 ಡೇವಿಸ್ ಕಪ್‌ನಲ್ಲಿ ಭಾರತದ ಆಟಗಾರನೊಂದಿಗೆ ಪಾಕಿಗಳ ಆಕ್ರಮಣಕಾರಿ ವರ್ತನೆ; ನೆಟ್ಟಿಗರಿಂದ ಆಕ್ರೋಶ
ಈ ವೇಳೆ ನೂರಾರು ಮಂದಿ ವಾಹನಗಳಲ್ಲಿ ಆಂಬುಲೆನ್ಸ್ ಜೊತೆ ಸಾಗುತ್ತಿದ್ದಾರೆ. ಮೃತದೇಹವು ಕುತ್ತಾರ್ , ತೊಕ್ಕೊಟ್ಟು, ಪಂಪ್ವೆಲ್ ಮಾರ್ಗವಾಗಿ ಫರಂಗಿಪೇಟೆ ತಲುಪಿದಾಗ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದ ಜನರ ಗುಂಪು ರಸ್ತೆ ತಡೆ ನಡೆಸಿ ಹತ್ಯೆಯನ್ನು ಖಂಡಿಸಿದರು. ಅಕ್ರೋಶಿತ ಗುಂಪು ಸರ್ಕಾರದ ವಿರುದ್ದ ಘೋಷಣೆ ಕೂಗಿದ್ದು. ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಆಕ್ರೋಶಿತ ಗುಂಪನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದು. ಬಳಿಕ ಪೊಲೀಸರು ಆಕ್ರೋಶಿತರನ್ನು ಸಮಾಧಾನಪಡಿಸಿ ಗುಂಪನ್ನು ಚದುರಿಸಿ ಆಂಬುಲೆನ್ಸ್ ಮುಂದೆ ಸಾಗಲು ಅನುವು ಮಾಡಿಕೊಟ್ಟರು. ಮೃತದೇಹವನ್ನು ರಹೀಂ ಬಂಟ್ವಾಳ ತಾಲೂಕಿನ ಕೊಳತ್ತಮಜಲಿನಲ್ಲಿರುವ ಮನೆಗೆ ಕೊಂಡೊಯ್ಯಲಾಗುತ್ತಿದೆ. ಸಂಜೆ ಹೊತ್ತಿಗೆ ಸ್ಥಳೀಯ ಮಸೀದಿಯಲ್ಲಿ ಅಂತಿಮ ಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ :ಸಂಭಾವನೆ ಇಲ್ಲದೆ ಅರಣ್ಯ ಇಲಾಖೆ ರಾಯಭಾರಿಯಾದ ಅನಿಲ್ ಕುಂಬ್ಳೆ; ಕನ್ನಡಿಗರಿಂದ ಮೆಚ್ಚುಗೆ