ಬೆಂಗಳೂರು : ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಅನಿಲ್ ಕುಂಬ್ಳೆ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನೇಮಕಗೊಂಡಿದ್ದು. ಇದಕ್ಕೆ ಅವರು ಯಾವುದೇ ಸಂಭಾವನೆ ಪಡೆಯುತ್ತಿಲ್ಲ. ಅನಿಲ್ ಕುಂಬ್ಳೆ ಅವರ ಈ ನಡೆ ಕನ್ನಡಿಗರಿಂದ ಮೆಚ್ಚುಗೆಗೆ ಕಾರಣವಾಗಿದೆ.
ಮೈಸೂರು ಸ್ಯಾಂಡಲ್ ಸೋಪ್ ಪ್ರಚಾರ ರಾಯಭಾರಿಯಾಗಿ ಕರ್ನಾಟಕ ಸರ್ಕಾರ ಇತ್ತೀಚೆಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾರನ್ನು ನೇಮಕ ಮಾಡಿಕೊಂಡಿತ್ತು. ಸುಮಾರು 6.2 ಕೋಟಿ ರೂಪಾಯಿ ಹಣ ನೀಡುವ ಮೂಲಕ ತಮನ್ನಾ ಭಾಟಿಯಾರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಇದರ ನಡುವೆ ರಾಜ್ಯ ಅರಣ್ಯ ಇಲಾಖೆ ಅನಿಲ್ ಕುಂಬ್ಳೆ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿಕೊಂಡಿದೆ. ಇದನ್ನೂ ಓದಿ :ಮಂಗಳೂರಿನಲ್ಲಿ ಮತ್ತೆ ಹರಿದ ನೆತ್ತರು; ಓರ್ವ ಸಾ*ವು, ಮತ್ತೊಬ್ಬನ ಸ್ಥಿತಿ ಗಂಭೀರ
ರಾಜ್ಯದ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನೇಮಕಗೊಂಡಿರುವ ಅನಿಲ್ ಕುಂಬ್ಳೆ ಅವರು ಇದಕ್ಕೆ ಯಾವುದೇ ಸಂಭಾವನೆ ಪಡೆಯುತ್ತಿಲ್ಲ ಎಂದು ತಿಳಿದು ಬಂದಿದ್ದು. ಅರಣ್ಯ ಮತ್ತು ಪರಿಸರ ಸಂರಕ್ಷಣೆಯ ಹಿತಾಸಕ್ತಿಯಿಂದ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅನಿಲ್ ಕುಂಬ್ಳೆ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ :ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಕನ್ನಡದ ಖ್ಯಾತ ನಟ ಅನಂತ್ ನಾಗ್
ಅನಿಲ್ ಕುಂಬ್ಳೆ ಅವರು ಇತ್ತೀಚೆಗೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದು. ಕ್ರಿಕೆಟ್ ಹೊರತಾಗಿ ವನ್ಯಜೀವಿ ಛಾಯಾಗ್ರಹಣದಲ್ಲಿಯೂ ಅನಿಲ್ ಕುಂಬ್ಳೆ ಅವರು ಆಸಕ್ತಿ ಹೊಂದಿದ್ದಾರೆ. ಒಂದೆಡೆ ತಮನ್ನಾ ವಿಚಾರ ವ್ಯಾಪಕ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ, ಅನಿಲ್ ಕುಂಬ್ಳೆ ಅವರು ಸಂಭಾವನೆಯನ್ನ ಪಡೆಯದೆ ಅರಣ್ಯ ಇಲಾಖೆ ಮತ್ತು ವನ್ಯಜೀವಿ ಸಂರಕ್ಷಣ ರಾಯಭಾರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಮೆಚ್ಚುಗೆಗೆ ಕಾರಣವಾಗಿದೆ.