ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ನಟ ದರ್ಶನ್ ಡೆವಿಲ್ ಸಿನಿಮಾ ಶೂಟಿಂಗಾಗಿ ದುಬೈ ಮತ್ತು ಯೂರೋಪ್‌ಗೆ ತೆರಳಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಜಾಮೀನು ಪಡೆದು ಜೈಲಿನಿಂದ ಹೊರಬಂದ ನಂತರ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿಯಾಗಿರುವ ನಟ ದರ್ಶನ್, ರಾಜಸ್ಥಾನ ಸೇರಿದಂತೆ ಹಲವಡೆ ಚಿತ್ರೀಕರಣ ನಡೆಸಿದ್ದಾರೆ. ಇದೀಗ ದುಬೈ ಮತ್ತು ಯೂರೋಪ್ನಲ್ಲಿ ಸಿನಿಮಾ ಶೂಟಿಂಗ್ಗೆ ತೆರಳಲು ಅನುಮತಿ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಿಆರ್‌ಪಿಸಿ ಸೆಕ್ಷನ್ 439(1) (b) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ. ಇದನ್ನೂ ಓದಿ :ಅಬ್ದುಲ್ ರಹೀಂ ಹತ್ಯೆ ಪ್ರಕರಣ; ಕರಾವಳಿ ಮತ್ತೆ ಉದ್ವಿಘ್ನ, ಬಸ್ಗಳ ಮೇಲೆ ಕಲ್ಲು ತೂರಾಟ
ಇನ್ನು ದರ್ಶನ್ ವಿದೇಶಕ್ಕೆ ತೆರಳಲು ಎಸ್‌ಪಿಪಿ ಆಕ್ಷೇಪ ವ್ಯಕ್ತಪಡಿಸಿದ್ದು. ಸುಪ್ರೀಂ ಕೋರ್ಟ್ನಲ್ಲಿ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ. ಇದರ ವಿಚಾರಣೆ ಇನ್ನು ಬಾಕಿ ಇದೆ. ಇದರ ನಡುವೆ ದರ್ಶನ್ ವಿದೇಶಕ್ಕೆ ತೆರಳಲು ಅವಕಾಶ ನೀಡಬಾರದು. ಇದು ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತದೆ ಎಂದು ವಿಶೇಷ ಸಾರ್ವಜನಿಕ ಅಭಿಯೋಜಕ (ಎಸ್‌ಪಿಪಿ) ಆಕ್ಷೇಪಣೆ ಸಲ್ಲಿಸಿದ್ದಾರೆ.