Thursday, August 21, 2025
Google search engine
HomeASTROLOGY'ತಾಳ್ಮೆಯ ಫಲ ಸಿಹಿಯಾಗಿರುತ್ತೆ' ; ಫೈನಲ್​ ಪಂದ್ಯಕ್ಕೂ ಮುನ್ನ RCBಗೆ ಶುಭಕೋರಿದ ಸಿಎಂ ಸಿದ್ದರಾಮಯ್ಯ

‘ತಾಳ್ಮೆಯ ಫಲ ಸಿಹಿಯಾಗಿರುತ್ತೆ’ ; ಫೈನಲ್​ ಪಂದ್ಯಕ್ಕೂ ಮುನ್ನ RCBಗೆ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್​ನ 18 ನೇ ಸೀಸನ್ ಈಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ನಾಲ್ಕನೇ ಬಾರಿಗೆ RCB ತಂಡ ಫಿನಾಲೆ ತಲುಪಿದ್ದು. ಆರ್​ಸಿಬಿ ಗೆಲುವಿಗಾಗಿ ಶುಭಷಯಗಳ ಮಹಾಪೂರವೇ ಹರಿದು ಬರುತ್ತಿದೆ. ಇತ್ತ ಸಿಎಂ ಸಿದ್ದರಾಮಯ್ಯ ಕೂಡ ಶುಭಕೋರಿದ್ದು. ‘ತಾಳ್ಮೆಯ ಫಲ ಸಿಹಿಯಾಗಿರುತ್ತದೆ’ ಆರ್​ಸಿಬಿ ಈ ಭಾರಿ ಕಪ್​ ಗೆಲ್ಲಲಿ ಎಂದು ಆರೈಸಿದ್ದಾರೆ.

ಇಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲ್ಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ಚೊಚ್ಚಲ ಪ್ರಶಸ್ತಿಗಾಗಿ ಹೋರಾಟ ನಡೆಸಲಿವೆ. ಎರಡೂ ತಂಡಗಳು ಕಳೆದ 17 ವರ್ಷಗಳಿಂದ ಒಮ್ಮೆಯೂ ಐಪಿಎಲ್ ಪ್ರಶಸ್ತಿ ಗೆದ್ದಿಲ್ಲ. ಹೀಗಾಗಿ ಉಭಯ ತಂಡಗಳಿಗೂ ಈ ಪಂದ್ಯ ಬಹಳ ಮುಖ್ಯವಾಗಿದೆ. ಇದನ್ನೂ ಓದಿ :ಥಗ್​ಲೈಫ್​ ಸಿನಿಮಾಗೆ ತಡೆ ನೀಡಿದ ಹೈಕೋರ್ಟ್​; ಕಮಲ್​ ಹಾಸನ್​ಗೆ ಮುಖಭಂಗ..!

ಸಿಎಂ ಟ್ವಿಟ್​..!

ಆರ್​ಸಿಬಿ ಫೈನಲ್​ ಪಂದ್ಯಕ್ಕೂ ಮುನ್ನ ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಷ್​ನಲ್ಲಿ ಟ್ವಿಟ್​ ಮಾಡಿ ಶುಭಕೋರಿದ್ದಾರೆ. “ಪಂಜಾಬ್ ತಂಡದ ವಿರುದ್ಧ ಇಂದು ಫೈನಲ್ ಪಂದ್ಯವಾಡುತ್ತಿರುವ ನಮ್ಮ ಆರ್‌ಸಿಬಿ ತಂಡಕ್ಕೆ ಶುಭ ಹಾರೈಕೆಗಳು. ಇದನ್ನೂ ಓದಿ :ಅಪ್ರಾಪ್ತ ಬಾಲಕಿ ಮೇಲೆ 55 ವರ್ಷದ ವ್ಯಕ್ತಿಯಿಂದ ಅತ್ಯಾಚಾರ

ಆರ್‌ಸಿಬಿ ತಂಡದ ಸೋಲು-ಗೆಲುವು, ಏಳು-ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ-ಸ್ಪೂರ್ತಿ ನೀಡುತ್ತಿರುವ ಕೋಟ್ಯಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್‌ಸಿಬಿ ಕಪ್ ಗೆಲ್ಲಲಿ ಎನ್ನುವುದು ನನ್ನ ಅಂತರಾಳದ ಬಯಕೆ.

“ತಾಳ್ಮೆಯ ಫಲ ಸಿಹಿಯಾಗಿರುತ್ತದೆಯಂತೆ”, ಆ ಸಿಹಿ ಇಂದು ಕನ್ನಡಿಗರ ಮತ್ತು ಜಗತ್ತಿನಾದ್ಯಂತ ಇರುವ ಆರ್‌ಸಿಬಿ ಅಭಿಮಾನಿಗಳ ಪಾಲಿಗಿರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್​ ಮಾಡಿ ಶುಭಕೋರಿದ್ದಾರೆ. ಇಂದು ಬೆಳಿಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಆರ್​ಸಿಬಿ ಜರ್ಸಿ ತೊಟ್ಟು, ವಿಡಿಯೋ ಮಾಡಿ ಶುಭಕೋರಿದ್ದರು. ಇದನ್ನೂ ಓದಿ :‘ಲಕ್ಷಾಂತರ ಜನರ ಕನಸನ್ನ ನನಸು ಮಾಡಿ’; RCB ಜರ್ಸಿ ತೊಟ್ಟು ವಿಶ್​ ಮಾಡಿದ ಡಿಕೆಶಿ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments