Thursday, August 21, 2025
Google search engine
HomeASTROLOGYಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಸಾ*ವು; ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಆಕ್ರೋಶ

ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಸಾ*ವು; ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಆಕ್ರೋಶ

ಬೆಂಗಳೂರು: ಆರ್​ಸಿಬಿ ಗೆಲುವಿನ ಸಂಭ್ರಮಚರಣೆಯಲ್ಲಿ ಭಾಗವಹಿಸಲು ಚಿನ್ನಸ್ವಾಮಿ ಕ್ರೀಡಾಂಗಣದ ಅಭಿಮಾನಿಗಳ ಸಾಗರವೇ ಜಮಾಯಿಸಿದ್ದು. ಈ ವೇಳೆ ನೂಕು-ನುಗ್ಗಲು ಮತ್ತು ಕಾಲ್ತುಳಿತ ಸಂಭವಿಸಿ 10ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ರಾಜ್ಯ ಬಿಜೆಪಿ ಟ್ವಿಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದು. ರಾಜ್ಯ ಸರ್ಕಾರ ರೀಲ್ಸ್​ ಮಾಡಲು ಮುಂದಾಗಿದ್ದು. ಸುರಕ್ಷತೆ ಬಗ್ಗೆ ನಿರ್ಲಕ್ಷ ತೋರಿಸಿದೆ ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ :RCB ಸಂಭ್ರಮೋತ್ಸವದ ವೇಳೆ ಭಾರೀ ದುರಂತ; ಇಬ್ಬರು ಸಾವು, 20ಕ್ಕೂ ಹೆಚ್ಚು ಜನರು ಅಸ್ವಸ್ಥ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಾವಿರಾರು ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ಕಿಕ್ಕಿರಿದು ಜಮಾಯಿಸಿದ್ದರು. ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 10ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಗಾಯಾಳುಗಳನ್ನು ವೈದ್ಹೇಹಿ ಆಸ್ಪತ್ರೆ ಮತ್ತು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಿಜೆಪಿ ಆಕ್ರೋಶ…!

ಸಂಭ್ರಮಾಚರಣೆಗೆ ಬಂದಿದ್ದ ಅಭಿಮಾನಿಗಳು ಸಾವನ್ನಪ್ಪಿರುವ ಕುರಿತು ರಾಜ್ಯ ಬಿಜೆಪಿ ಟ್ವಿಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದು. “ಕಾಲ್ತುಳಿತ ಮತ್ತು ನೂಕು ನುಗ್ಗಲಿನಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದಾಗಿ ಕಾಲ್ತುಳಿತ ಸಂಭವಿಸಿ ಹಲವರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಜನರನ್ನು ನಿಯಂತ್ರಿಸಲು ಸರಿಯಾದ ಕ್ರಮ ಕೈಗೊಂಡಿರಲಿಲ್ಲ. ಮೂಲಭೂತ ವ್ಯವಸ್ಥೆ ಕಲ್ಪಿಸಿರಲಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ :ನಿಷ್ಠೆ ಪ್ರಶಸ್ತಿ ಗೆಲ್ಲುವುದಷ್ಟೇ ಅಲ್ಲ, ಅದು ಇತಿಹಾಸ ನಿರ್ಮಿಸುತ್ತದೆ; ಆನಂದ್ ಮಹಿಂದ್ರಾ

ಜೊತೆಗೆ ಅಮಾಯಕರ ಅಭಿಮಾನಿಗಳು ಒಂದೆಡೆ ಸಾಯುತ್ತಿದ್ದರೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಕ್ರಿಕೆಟಿಗರ ಜೊತೆ ರೀಲ್ಸ್​ ಮಾಡುವುದರಲ್ಲಿ ಮತ್ತು ಪೋಟೋ ಶೂಟ್​ ಮಾಡುವುದರಲ್ಲಿ ಬ್ಯುಸಿ ಆಗಿದ್ದಾರೆ. ಸರ್ಕಾರ ನಿರ್ಲಕ್ಷದ ಪರಿಣಾಮ ಘಟನೆ ಸಂಭವಿಸಿದ್ದು. ರಾಜ್ಯ ಸರ್ಕಾರದ ಕೈಗೆ ಅಮಾಯಕ ರಕ್ತ ಅಂಟಿಕೊಂಡಿದೆ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ಟ್ವಿಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments