ಬೆಂಗಳೂರು: ಆರ್ಸಿಬಿ ವಿಜಯೋತ್ಸವಕ್ಕೆ ಬಂದಿದ್ದ ಅಭಿಮಾನಿಗಳು ಕಾಲ್ತುಳಿತಕ್ಕೆ ಬಲಿಯಾಗಿದ್ದು. ಘಟನೆ ಸಂಬಂಧ ಆರ್ಸಿಬಿ ಫ್ರ್ಯಾಂಚೈಸಿ ವಿರುದ್ದ ಕೊನೆಗೂ ಎಫ್ಐಆರ್ ದಾಖಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಕ್ರೀಡಾಂಗಣದ ಹೊರಗೆ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ಸಂದರ್ಭದಲ್ಲಿ, ಕ್ರೀಡಾಂಗಣಕ್ಕೆ ಪ್ರವೇಶಿಸಲು ಪ್ರಯತ್ನಿಸುವಾಗ ಕಾಲ್ತುಳಿತ ಸಂಭವಿಸಿತು, ಇದರಲ್ಲಿ 11 ಅಭಿಮಾನಿಗಳು ಪ್ರಾಣ ಕಳೆದುಕೊಂಡರೆ, ಅನೇಕ ಅಭಿಮಾನಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ:ನಿನ್ನೆ ಒಂದೇ ದಿನ 250 ಮೊಬೈಲ್ ಕಳ್ಳತನ; ಕಾಲ್ತುಳಿತದ ವೇಳೆ ಕೈಚಳಕ ತೋರಿಸಿದ ಕಳ್ಳರು
ಇಷ್ಟೆಲ್ಲಾ ನಡೆದರು ರಾಜ್ಯ ಪೊಲೀಸ್ ಇಲಾಖೆ ಯಾರ ಮೇಲೂ ಪ್ರಕರಣ ದಾಖಲಿಸದೆ, ಅಸಹಜ ಸಾವು ಎಂದು UDR ದಾಖಲಿಸಿಕೊಂಡು ನಿರ್ಲಕ್ಷ ತೋರಿಸಿತ್ತು. ಇದೀಗ ಎಚ್ಚೆತ್ತಿರುವ ಪೊಲೀಸ್ ಇಲಾಖೆ ಆರ್ಸಿಬಿ ಫ್ರ್ಯಾಂಚೈಸಿ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSDC) ಮತ್ತು DNA ಮ್ಯಾನೇಜ್ ಮೆಂಟ್ ವಿರುದ್ದ ಎಫ್ಐಆರ್ ದಾಖಲಿಸಿದೆ. ಇದನ್ನೂ ಓದಿ:ಮದ್ವೆಗೆ ಹುಡುಗಿ ನೋಡ್ಕೊಂಡು ಬೆಂಗಳೂರಿಗೆ ಬಂದಿದ್ದ ಯುವಕ ಸಾ*ವು ; ಪೋಷಕರ ಆಕ್ರಂದನ
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 195ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು. ನಿರ್ಲಕ್ಷದಿಂದ ದುರಂತ ಸಂಭವಿಸಿದೆ ಎಂದು ಪ್ರಕರಣ ದಾಖಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ. ಸರ್ಕಾರದ ಭದ್ರತಾ ವೈಫಲ್ಯದ ಆರೋಪ ಕೇಳಿಬಂದಿದೆ. ಸರ್ಕಾರ ಸಾವನ್ನಪ್ಪಿದವರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದೀಗ ಆರ್ಸಿಬಿ ಫ್ರಾಂಚೈಸಿ ಕೂಡ ಪರಿಹಾರ ನೀಡುವುದಾಗಿ ಘೋಷಿಸಿವೆ. ಇದನ್ನೂ ಓದಿ:‘ಸರ್ಕಾರಕ್ಕೆ ನಮ್ಮ ಶಾಪ ತಟ್ಟದೆ ಇರಲ್ಲ’; ಮೃತ ಭೂಮಿಕ್ ಪೋಷಕರ ಆಕ್ರೋಶ