ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮತ್ತೊಬ್ಬ ಅಧಿಕಾರಿಯನ್ನ ರಾಜ್ಯ ಸರ್ಕಾರ ಎತ್ತಂಗಡಿ ಮಾಡಿ ಆದೇಶ ಹೊರಡಿಸಿದ್ದು. ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ಎತ್ತಂಗಡಿ ಮಾಡಲಾಗಿದೆ. ಇದನ್ನೂ ಓದಿ:ಪೊಲೀಸ್ ಕಮಿಷನರ್ ದಯಾನಂದ ಅಮಾನತು; ಸರ್ಕಾರದ ವಿರುದ್ದ ಹಿಡಿದು ಹೆಡ್ ಕಾನ್ಸ್ಟೇಬಲ್ ಪ್ರತಿಭಟನೆ
ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ಎತ್ತಂಗಡಿ ಮಾಡಿದೆ. ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಬುಧವಾರ (ಜೂ.04) ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ದೇಶದೆಲ್ಲಡೆ ಸದ್ದು ಮಾಡಿತ್ತು. ಇದು ಗುಪ್ತಚರ ಇಲಾಖೆಯ ವೈಪಲ್ಯವೆಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಸ್ವತಃ ಮುಖ್ಯಮಂತ್ರಿಗಳೆ ಆರ್ಸಿಬಿ ಅಭಿಮಾನಿಗಳು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಗಮಿಸುತ್ತಾರೆ ಎಂಬ ಅಂದಾಜು ಇರಲಿಲ್ಲ ಎಂದು ಹೇಳಿದ್ದರು. ಇದರ ನಡುವೆ ಗುಪ್ತಚರ ಇಲಾಖೆಯ ಪ್ರಮುಖರನ್ನೇ ಎತ್ತಂಗಡಿ ಮಾಡಲಾಗಿದೆ.
ಇದನ್ನೂ ಓದಿ :‘ಟ್ರಂಪ್ ಚುನಾವಣೆ ಗೆದ್ದಿದ್ದೇ ನನ್ನಿಂದ’; ಟ್ರಂಪ್ ವಿರುದ್ದ ತಿರುಗಿ ಬಿದ್ದ ಎಲಾನ್ ಮಸ್ಕ್
1998 ರ ಬ್ಯಾಚ್ನ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ಗುಪ್ತಚರ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆಗಿ ಕಳೆದ ವರ್ಷದ ಸೆಪ್ಟೆಂಬರ್ ನಲ್ಲಿ ರಾಜ್ಯ ಸರಕಾರ ನೇಮಕ ಮಾಡಿತ್ತು.


