ಕಾಲ್ತುಳಿತ ಪ್ರಕರಣ; ಆರ್​ಸಿಬಿ ಮಾರ್ಕೆಟಿಂಗ್​ ಮುಖ್ಯಸ್ಥ ಸೇರಿದಂತೆ ನಾಲ್ವರನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರ್​ಸಿಬಿಯ ಮಾರ್ಕೆಟಿಂಗ್​ ಮುಖ್ಯಸ್ಥ ನಿಖಿಲ್​ ಸೋಸಲೆ, ಡಿಎನ್​ಎ ಇವೆಂಟ್​ ಮ್ಯಾನೇಜಮೆಂಟ್​ನ ಸಿಬ್ಬಂದಿ ಕಿರಣ್, ಸುಮಂತ್ ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದು. ನಿಖಿಲ್​ ಸೋಸಲೆಯನ್ನು ವಿಮಾನ ನಿಲ್ದಾಣದಲ್ಲಿ ಬಂಧನ ಮಾಡಲಾಗಿದೆ. ಇದನ್ನೂ ಓದಿ :ಉತ್ತರಾ​ಖಂಡ್​; ಸ್ವಂತ ಮಗಳ ಮೇಲೆ ಬಾಯ್​ಫ್ರೆಂಡ್​​ನಿಂದ ಅತ್ಯಾಚಾರ ಮಾಡಿಸಿದ ತಾಯಿ..!

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿರುವ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್​ ಪಾರ್ಕ್​ ಪೊಲೀಸರು ಕಾರ್ಯಚರಣೆಗೆ ಇಳಿದಿದ್ದು. ಘಟನೆಗೆ ಕಾರಣರಾದ ಆರೋಪದ ಮೇಲೆ RCB, KSCA ಮತ್ತು DNA ಸಂಸ್ಥೆಗಳ ಸಿಬ್ಬಂದಿಗಳನ್ನ ಬಂಧಿಸಿದ್ದಾರೆ. ಆರ್​ಸಿಬಿಯ ಮಾರ್ಕೆಟಿಂಗ್​ ಮುಖ್ಯಸ್ಥ ನಿಖಿಲ್​ ಸೋಸಲೆ ಬಂಧನ ಭೀತಿಯಿಂದ ಪಾರಾಗಲು ಮುಂಬೈಗೆ ಪ್ರಯಾಣಿಸುತ್ತಿದ್ದ ವೇಳೆ ವಿಮಾನ ನಿಲ್ದಾಣದಲ್ಲಿ ಬಂಧನ ಮಾಡಿದ್ದಾರೆ.

ಬಂಧಿಸಿದ್ದು ಯಾಕೆ..!

ನಗರದ ಹೃದಯಭಾಗದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂಧಿ ಪ್ರಾಣ ಕಳೆದುಕೊಂಡಿದ್ದರು. ಆದರೆ ಈ ಘಟನೆಯಿಂದ ಆರ್​ಸಿಬಿ ಫ್ರಾಂಚೈಸಿ ಮತ್ತು ಕರ್ನಾಟಕ ಕ್ರಿಕೆಟ್​ ಅಸೋಸಿಯೇಷನ್​ ಪ್ರಕರಣದಿಂದ ನುಣುಚಿಕೊಳ್ಳಲು ಯತ್ನಿಸಿತ್ತು. ಆದರೆ ಘಟನೆಗೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ವಿಕ್ಟರಿ ಪರೇಡ್​ ನಡೆಸುವುದಾಗಿ ಆರ್​ಸಿಬಿಯ ಸಾಮಾಜಿಕ ಜಾಲತಾಣ ಖಾತೆಯಿಂದ ಪೋಸ್ಟ್‌ ಮಾಡಲಾಗಿತ್ತು.  ಇದನ್ನೂ ಓದಿ :Stand with B Dayanand ; ಸರ್ಕಾರದ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಜೊತೆಗೆ ಸ್ಟೇಡಿಯಂನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜನರಿಗೆ ಉಚಿತ ಟಿಕೆಟ್​ ಘೋಷಣೆಯನ್ನು ಮಾಡಲಾಗಿತ್ತು. ಆದರೆ ಟಿಕೆಟ್‌ ಎಲ್ಲಿ ಸಿಗುತ್ತದೆ ಎಂಬ ಮಾಹಿತಿ ಯಾರ ಬಳಿಯೂ ಇರಲಿಲ್ಲ. ನಂತರ ಗೇಟ್‌ 9 ಮತ್ತು 10 ರ ಬಳಿ ಮಧ್ಯಾಹ್ನ 1 ಗಂಟೆಯ ನಂತರ ಟಿಕೆಟ್‌ ಸಿಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಆದರೆ ಮಧ್ಯಾಹ್ನ 1 ಗಂಟೆಯಾದರೂ ಟಿಕೆಟ್‌ ವಿತರಣೆ ಪ್ರಕ್ರಿಯೆ ನಡೆದಿರಲಿಲ್ಲ. ಈ ಮಧ್ಯೆ ಮಧ್ಯಾಹ್ನ 3:14ಕ್ಕೆ ಆರ್‌ಸಿಬಿ ವೆಬ್‌ಸೈಟ್‌ನಲ್ಲಿ ಟಿಕೆಟ್‌ ಸಿಗಲಿದೆ ಎಂದು ಪೋಸ್ಟ್‌ ಮಾಡಲಾಗಿತ್ತು. ಇದನ್ನೂ ಓದಿ :ಅನುಮಾನಸ್ಪದ ರೀತಿಯಲ್ಲಿ ಮಂಗಳೂರಿನ ಬಿಜೆಪಿ ಮುಖಂಡ ಸಾವು; ಸಾವಿನ ಸುತ್ತ ಅನುಮಾನದ ಹುತ್ತ

ಇಷ್ಟೇಲ್ಲಾ ಗೋಜಲುಗಳಿಗೆ ಕಾರಣವಾದ ಆರ್​ಸಿಬಿ ಮ್ಯಾನೇಜ್​ಮೆಂಟ್​ ​ಮತ್ತು ಡಿಎನ್​ಎ ಇವೆಂಟ್​ ಮ್ಯಾನೇಜ್​ಮೆಂಟ್ ವಿರುದ್ದ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಘಟನೆ ಸಂಬಂಧ ನಾಲ್ವರನ್ನು ಬಂಧಿಸಿದ್ದು. ಆರೋಪಿಗಳನ್ನು ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಿ, ನಂತರ ನ್ಯಾಯಲಯದ ಮುಂದೆ ಹಾಜರು ಪಡಿಸಿ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES