ತುಮಕೂರು: ತುಮಕೂರು ‘ಲೋಕ’ ಅಖಾಡ ರಂಗೇರಿದೆ. ಹಾಲಿ ಸಂಸದ ಮುದ್ದಹನುಮೇಗೌಡ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿಹೋಗಿತ್ತು. ಇತ್ತೀಚಿನ ಬೆಳವಣಿಗೆಯಲ್ಲಿ ನಾಮಪತ್ರ ವಾಪಸ್ ಪಡೆಯುವಂತೆ ಮುದ್ದಹನುಮೇಗೌಡರ ಮೇಲೆ ಕಾಂಗ್ರೆಸ್ ನಾಯಕರು ಒತ್ತಡ ಹೇರುತ್ತಿದ್ದಾರೆ. 2 ದಿನದಲ್ಲಿ ನಾಮಪತ್ರ ವಾಪಸ್ ಪಡೆಯುವಂತೆ ಕಾಂಗ್ರೆಸ್ ನಾಯಕರು ಒತ್ತಡ ಹೇರುತ್ತಿದ್ದಾರೆ
ತುಮಕೂರು ಕ್ಷೇತ್ರದಿಂದ ಮಾಜಿ ಪ್ರಧಾನಿ ದೇವೇಗೌಡರು ಸ್ಪರ್ಧಿಸುತ್ತಿದ್ದು, ಅವರಿಗೆದುರಾಗಿ ಮುದ್ದಹನುಮೇಗೌಡರು ಕಣಕ್ಕಿಳಿಯುತ್ತಿದ್ದಾರೆ. ತುಮಕೂರು ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲಗಳಿತ್ತು. ಟಿಕೆಟ್ ತಮಗೇ ಸಿಗುತ್ತದೆ ಎಂದುಕೊಂಡಿದ್ದ ಮುದ್ದಹನುಮೇಗೌಡರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಇದೀಗ ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್ ಮುಖಂಡರು ಡಿಸಿಎಂ ಪರಮೇಶ್ವರ್ ಮೇಲೆ ಒತ್ತಡ ಹೇರಿದ್ದಾರೆ.