ಬೆಂಗಳೂರು: ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆಯಾಗಿ ನೇಮಿಸಲಾಗಿದೆ. ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷೆಯಾಗಿ ನೇಮಿಸಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ. ಮಾಜಿ ಕೇಂದ್ರ ಸಚಿವ ದಿ. ಅನಂತ್ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಯುವನಾಯಕ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿ ಅಖಾಡಕ್ಕಿಳಿಸಲಾಗಿದೆ. ತೇಜಸ್ವಿನಿ ಅವರಿಗೆ ಟಿಕೆಟ್ ಕೈತಪ್ಪಿದ್ದು ಅವರ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಧಾನಿ ಮೋದಿ ಅವರ ಯಶಸ್ಸಿಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕೆಂದು ಅವರು ಬೆಂಬಲಿಗರಿಗೆ ಕರೆ ನೀಡಿದ್ದರು.
I am very delighted to announce that Smt. @Tej_AnanthKumar has been appointed as state vice president of @BJP4Karnataka.
Wishing her all the very best.
— B.S.Yediyurappa (@BSYBJP) April 2, 2019