ನವದೆಹಲಿ: ಮಧ್ಯಪ್ರದೇಶ ಸಿಎಂ ಕಮಲ್ ನಾಥ್ ಅವರ ಮಾಜಿ ಆಪ್ತ ಕಾರ್ಯದರ್ಶಿ ಪ್ರವೀಣ್ ಕಕ್ಕರ್ ಹಾಗೂ ಮಾಜಿ ಸಲಹೆಗಾರ ರಾಜೇಂದ್ರ ಕುಮಾರ್ ಮನೆ ಮೇಲೆ ಐಟಿ ದಾಳಿ ನಡೆದಿದೆ. ದೆಹಲಿ ಹಾಗೂ ಮಧ್ಯಪ್ರದೇಶದಲ್ಲಿ ಇಬ್ಬರು ಅಧಿಕಾರಿಗಳ ಮನೆ ಸೇರಿ ಒಟ್ಟು 9 ಕೋಟಿ ರೂಪಾಯಿಗೂ ಹೆಚ್ಚು ನಗದು ದೊರೆತಿದೆ ಎಂದು ತಿಳಿದುಬಂದಿದೆ.
ಹವಾಲಾ ಕೇಸ್ಗೆ ಸಂಬಂಧಿಸಿದಂತೆ ಇಂದೋರ್ನಲ್ಲಿರುವ ಪ್ರವೀಣ್ ಹಾಗೂ ದೆಹಲಿಯ ಮಿಗ್ಲಾನಿಯಲ್ಲಿರುವ ರಾಜೇಂದ್ರ ಅವರ ಮನೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿಯ 15 ಜನ ಐಟಿ ಅಧಿಕಾರಿಗಳ ತಂಡ ಪ್ರವೀಣ್ ಕಕ್ಕರ್ ಅವರ ಇಂಡದೋರ್ನ ವಿಜಯನಗರದಲ್ಲಿರುವ ಮನೆ ಮೇಲೆ ಬೆಳಗ್ಗೆ 3 ಗಂಟೆಗೆ ದಾಳಿ ನಡೆಸಿದ್ದಾರೆ. ಚುನಾವಣಾ ಸಂದರ್ಭ ಹವಾಲಾ ಮೂಲಕ ದೊಡ್ಡ ಮೊತ್ತದ ಟ್ರಾನ್ಸಾಕ್ಷನ್ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.