ಮೈಸೂರು: ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಸಚಿವ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಹಳ್ಳಿ ಮೈಸೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಏ. 7ರಂದು ಸಮುದಾಯವೊಂದನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದ ಸಂದರ್ಭ, ಜಾತಿಯಾಧಾರಿಸಿ ಮತದಾನ ಮಾಡಲು ಸೂಚನೆ ನೀಡಿರುವ ಆರೋಪದಲ್ಲಿ ಕೇಸು ದಾಖಲಿಸಲಾಗಿದೆ.
ಲೋಕಸಭಾ ಚುನಾವಣೆಗೆ ಬೆರಳೆಣಿಕೆಯ ದಿನಗಳಷ್ಟೇ ಬಾಕಿ ಇದ್ದು, ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದರೆ, ಬಿಜೆಪಿಯಿಂದ ಎ. ಮಂಜು ಸ್ಪರ್ಧಿಸುತ್ತಿದ್ದಾರೆ. ಈಗಾಗಲೇ ಮೈತ್ರಿ ಪಕ್ಷದ ವರಿಷ್ಠರು ಕ್ಷೇತ್ರದಲ್ಲಿ ಪ್ರಚಾರ ನಡೆಸಿ, ಪ್ರಜ್ವಲ್ ಪರ ಮತ ಯಾಚಿಸಿದ್ದಾರೆ.