ಬೀದರ್: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ 23ರಂದು ನಡೆಯಲಿದ್ದು, ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೀದರ್ನ ಯುವಕ, ಯುವತಿಯರು ಡ್ಯಾನ್ಸ್ ಮಾಡಿದ್ದಾರೆ.
ಬೀದರ್ ನಗರದ ಬಸವೇಶ್ವರ್ ವೃತ್ತದಲ್ಲಿಂದು ಜಿಲ್ಲಾ ಬಿಜೆಪಿ ಹಾಗೂ ಏಕತಾ ಗ್ರೂಪ್ ವತಿಯಿಂದ ಸಾರ್ವಜನಿಕರಲ್ಲಿ ಡ್ಯಾನ್ಸ್ ಮಾಡುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ಮತದಾನ ಜಾಗೃತಿಯಲ್ಲಿ ಏಕತಾ ಸಂಘಟನೆಯ ಯುವಕ ಯುವತಿಯರು ವಿವಿಧ ರೀತಿಯ ಸಾಂಗ್ಗಳಿಗೆ ಸ್ಟೆಪ್ ಹಾಕುವ ಮೂಲಕ ಜಾಗೃತಿ ಮೂಡಿಸಿದ್ರು. ಡ್ಯಾನ್ಸ್ ಮಾಡಿ 23ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವಂತೆ ನೆರೆದಿದ್ದ ಸಾರ್ವಜನಿಕರಲ್ಲಿ ಕೇಳಿಕೊಂಡರು.