ಕೊಲಂಬೋ: ಶ್ರೀಲಂಕಾದ ಕೊಲಂಬೋದಲ್ಲಿ ಚರ್ಚ್ ಹಾಗೂ ಹೋಟೆಲ್ಗಳ ಮೇಲೆ ಸರಣಿ ಸ್ಫೋಟ ನಡೆದ ಹಿನ್ನೆಲೆಯಲ್ಲಿ ಅಧ್ಯಕ್ಷ ಮೈತ್ರಿಪಾಲ್ ಸಿರಿಸೇನೆ ಅವರು ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.
ತುರ್ತು ಪರಿಸ್ಥತಿ ಇಂದು ರಾತ್ರಿಯಿಂದ ಅನ್ವಯವಾಗಲಿದೆ. ಮೈತ್ರಿಪಾಲ್ ಸಿರಿಸೇನೆ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಂಗಳವಾರವನ್ನು ಶೋಕಾಚರಣೆ ದಿನವಾಗಿ ಆಚರಿಸಲು ನಿರ್ಧರಿಸಲಾಗಿದೆ. ಸರಣಿ ಸ್ಫೋಟಗಳ ನಂತರ ಘೋಷಿಸಲಾಗಿದ್ದ ಕರ್ಫ್ಯೂವನ್ನು ತೆರವುಗೊಳಿಸಿದೆ.