Friday, January 3, 2025

ಕೊಲಂಬೋ ಸ್ಫೋಟ – ಬೆಂಗಳೂರಿನಲ್ಲೂ ಹೈ ಅಲರ್ಟ್​..!

ಬೆಂಗಳೂರು: ಶ್ರೀಲಂಕಾದಲ್ಲಿ ಬಾಂಬ್​ ಸ್ಫೋಟ ನಡೆದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. ಈ ಬಗ್ಗೆ ಬೆಂಗಳೂರು ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನೂ ತೆಗೆದುಕೊಂಡಿದ್ದಾರೆ. ಸಂಜೆ 4 ಗಂಟೆಗೆ ಕಮಿಷನರ್​ ಸುನೀಲ್​ ಕುಮಾರ್​ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ನಗರದ ಎಲ್ಲಾ ಸ್ಟಾರ್ ಹೋಟೆಲ್​ ಮಾಲೀಕರು, ಮಾಲ್​ಗಳ ಮುಖ್ಯಸ್ಥರಿಗೂ ಬುಲಾವ್​ ನೀಡಲಿದ್ದಾರೆ. ಚರ್ಚ್, ದೇವಸ್ಥಾನ, ಮಸೀದಿಗಳ ಮುಖ್ಯಸ್ಥರೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಭದ್ರತೆ ಕುರಿತು ಎಲ್ಲರಿಗೂ ಖಡಕ್​ ಎಚ್ಚರಿಕೆ ನೀಡಲು ಪೊಲೀಸರು ತೀರ್ಮಾನಿಸಿದ್ದಾರೆ. ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ಸರಣಿ ಬಾಂಬ್​ ಸ್ಫೋಟ ನಡೆದಿದ್ದು, 300ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ನಿನ್ನೆ ಮೈಸೂರು, ಮಂಡ್ಯದಲ್ಲಿಯೂ ಭದ್ರತೆ ತಪಾಸಣೆ ನಡೆಸಲಾಗಿತ್ತು.

RELATED ARTICLES

Related Articles

TRENDING ARTICLES