ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಸಭೆ ಮುಕ್ತಾಯವಾಗಿದೆ. ಮೈತ್ರಿ ಜೊತೆ ಸಮನ್ವಯ ಸಾಧಿಸಬೇಕು ಅಂತ ರಾಹುಲ್ ಗಾಂಧಿ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ. ಸಭೆಯಲ್ಲಿ ಹೈಕಮಾಂಡ್ ಜೊತೆ ರಾಜ್ಯ ನಾಯಕರು ಭಿನ್ನಾಭಿಪ್ರಾಯ ತೊಡಿಕೊಂಡಿದ್ದಾರೆ.
“ಕಾಂಗ್ರೆಸ್ ನಾಯಕರು ಟೀಕೆಗಳನ್ನು ಮಾಡೊದು ನಿಲ್ಲಿಸಬೇಕು. ಲೋಕಸಭೆ ಚುನಾವಣೆ ಹಿನ್ನೆಲೆ ಕ್ರಮ ತೆಗೆದುಕೊಂಡಿರಲಿಲ್ಲ. ಮೈತ್ರಿಯಲ್ಲಿ ಸಮಸ್ಯೆ ಇದೆ. ಅದನ್ನು ನಿವಾರಿಸಿಕೊಂಡು ಹೋಗಬೇಕಿದೆ. ಚುನಾವಣೆವರೆಗೂ ಒಂದು ರೀತಿಯ ಮೈತ್ರಿ ಇತ್ತು. ಇನ್ನು ಮುಂದೆ ಭಿನ್ನಾಭಿಪ್ರಾಯ ಸಹಿಸಲು ಸಾಧ್ಯವಿಲ್ಲ. ಪಕ್ಷದಲ್ಲಿ ಶಿಸ್ತು ಉಲ್ಲಂಘನೆಗೆ ಅವಕಾಶವಿಲ್ಲ. ನಾಯಕರು ಶಿಸ್ತು ಉಲ್ಲಂಘಿಸಿದರೆ ಕ್ರಮ ಖಚಿತ ಅಂತ ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.