65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ. ಈ ಬಾರಿ ಕನ್ನಡ ಚಿತ್ರರಂಗ ಬರೋಬ್ಬರಿ 11 ರಾಷ್ಟ್ರ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡು ಐತಿಹಾಸಿಕ ಸಾಧನೆ ಮಾಡಿದೆ.
ನಟಿ ಶೃತಿ ಹರಿಹರನ್ ಅಭಿನಯಿಸಿರುವ ನಾತಿಚರಾಮಿ ಚಿತ್ರ ಅತ್ಯುತ್ತಮ ಪ್ರಾದೇಶಿಕ ಪ್ರಶಸ್ತಿಯನ್ನು ತನ್ನತೆಕ್ಕೆಗೆ ಹಾಕಿಕೊಂಡರೆ, ಭಾರತೀಯ ಚಿತ್ರರಂಗವೇ ಹುಬ್ಬೇರಿಸುವಂತೆ ಮಾಡಿ ಕನ್ನಡ ಚಿತ್ರರಂಗಕ್ಕೆ ಹೊಸ ಭಾಷ್ಯ ಬರೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಬೆಸ್ಟ್ ಆ್ಯಕ್ಷನ್ ಫಿಲ್ಮ್ ಅವಾರ್ಡ್ ಪಡೆದಿದೆ. ಇನ್ನು ಸ್ಯಾಂಡಲ್ವುಡ್ನಲ್ಲಿ ಭರ್ಜರಿ ಸೌಂಡ್ ಮಾಡಿದ್ದ ರಿಷಬ್ ಶೆಟ್ಟಿ ನಿರ್ದೇಶನದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾವೂ ಅತ್ಯತ್ತಮ ಮಕ್ಕಳ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ.
ಪ್ರಶಸ್ತಿ ಪಟ್ಟಿ
1 ಅತ್ಯುತ್ತಮ ಪ್ರಾದೇಶಿಕ ಚಿತ್ರ – ನಾತಿಚರಾಮಿ
2 ಅತ್ಯುತ್ತಮ ಸಾಹಸ ಚಿತ್ರ – ಕೆಜಿಎಫ್
3 ಅತ್ಯುತ್ತಮ ಮಹಿಳಾ ಗಾಯಕಿ- ಬಿಂದು ಮಾಲಿನಿ(ನಾತಿಚರಾಮಿ)
4 ಅತ್ಯುತ್ತಮ ಸಾಹಿತ್ಯ ಪ್ರಶಸ್ತಿ – ನಾತಿಚರಾಮಿ
5 ಅತ್ಯುತ್ತಮ ಸಂಕಲನ – ನಾತಿಚರಾಮಿ
6 ಅತ್ಯುತ್ತಮ ವಿಎಫ್ ಎಕ್ಸ್ ಚಿತ್ರ – ಕೆಜಿಎಫ್
7ಅತ್ಯುತ್ತಮ ರಾಷ್ಟ್ರೀಯ ಏಕತಾ ಚಿತ್ರ – ಒಂದಲ್ಲ, ಎರಡಲ್ಲ
8 ಅತ್ಯುತ್ತಮ ಬಾಲ ಕಲಾವಿದ – ಒಂದಲ್ಲ, ಎರಡಲ್ಲ
9 ಅತ್ಯುತ್ತಮ ಮಕ್ಕಳ ಚಿತ್ರ – ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು
10 ಅತ್ಯುತ್ತಮ ರಾಷ್ಟ್ರೀಯ ಆಕ್ರ್ಸೂಸ್ ಚಿತ್ರ – ಮೂಕಜ್ಜಿಯ ಕನಸುಗಳು
11 ವಿಶೇಷ ಪ್ರಶಸ್ತಿ-ಶೃತಿ ಹರಿಹರನ್(ನಾತಿಚರಾಮಿ)