ಜಮೈಕಾ: ವೆಸ್ಟ್ ಇಂಡೀಸ್ ವಿರುದ್ಧದ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಆಕರ್ಷಕ ಶತಕ ಬಾರಿಸಿದ ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ತಂಡದ ಗೆಲುವಿಗೆ ಕಾರಣರಾದ್ರು. ಇದು ಕೊಹ್ಲಿಯವ್ರ ದಾಖಲೆಯ 43ನೇ ಶತಕವಾಗಿದ್ದು, ಇದರ ಜೊತೆಗೆ ವಿಶ್ವದಾಖಲೆಯೊಂದನ್ನು ಸ್ಥಾಪಿಸಿದ್ದಾರೆ.
ರನ್ ಮೆಶಿನ್ ವಿರಾಟ್ ಕೊಹ್ಲಿ ಕಳೆದ ಒಂದು ದಶಕದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಗರಿಷ್ಟ ರನ್ ಬಾರಿಸಿದ ಆಟಗಾರರಲ್ಲಿ ಮೊದಲ ಸ್ಥಾನವನ್ನು ಅಲಂಕಾರಿಸಿದ್ದಾರೆ. ಈ ಹಿಂದೆ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಟಿಂಗ್ 18962 ರನ್ ಬಾರಿಸಿ ಅಗ್ರಸ್ಥಾನದಲ್ಲಿದ್ರು. ಇದೀಗ ದಶಕವೊಂದರಲ್ಲಿ ಕೊಹ್ಲಿ 20000 ರನ್ ಗಳಿಸಿದ್ದಾರೆ. ಈ ಮೂಲಕ ಪಾಟಿಂಗ್ ದಾಖಲೆಯನ್ನು ಹಿಂದಿಕ್ಕಿ ಅಗ್ರಪಂಥೀಯರಾಗಿದ್ದಾರೆ.