ಆ್ಯಶಸ್ ಟೆಸ್ಟ್ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಅವರು ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಅಷ್ಟೇ ಅಲ್ಲದೇ, ಸದ್ಯ ನಂ.1 ಸ್ಥಾನದಲ್ಲಿರುವ ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿಗೂ, ಸ್ಮಿತ್ ಅವರಿಗೂ ಕೇವಲ 9 ಪಾಯಿಂಟ್ಗಳ ಅಂತರವಿದ್ದು, ವಿರಾಟ್ ನಂ.1 ಸ್ಥಾನಕ್ಕೆ ಕುತ್ತು ಬಂದಿದೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಯಮ್ಸನ್ ಅವರನ್ನು ಹಿಂದಿಕ್ಕಿ ಸ್ಮಿತ್ ಸೆಕೆಂಡ್ ಪ್ಲೇಸ್ಗೆ ಬಂದಿದ್ದಾರೆ.
ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ಒಂದು ವರ್ಷ ನಿಷೇಧಕ್ಕೊಳಗಾಗಿದ್ದ ಸ್ಟೀವ್ ಸ್ಮಿತ್ ಅವರು ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಟೆಸ್ಟ್ನಲ್ಲಿ ಕಮ್ ಬ್ಯಾಕ್ ಮಾಡಿದ್ರು. ಮೊದಲ ಟೆಸ್ಟ್ನ ಎರಡೂ ಇನ್ನಿಂಗ್ಸ್ಗಳಲ್ಲೂ ಶತಕ ಸಿಡಿಸಿದ ಅವ್ರು ದ್ವಿತೀಯ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ 92 ರನ್ ಬಾರಿಸಿದ್ರು. ಮೂರು ಇನ್ನಿಂಗ್ಸ್ಗಳಿಂದ 126ರ ಸರಾಸರಿಯಲ್ಲಿ ಒಟ್ಟು 378 ರನ್ಗಳನ್ನು ಗಳಿಸಿದ್ದಾರೆ.