ನವದೆಹಲಿ : ಆರಂಭಿಕ ಆಟಗಾರನಾಗಿ ಟಿ20, ಒಡಿಐನಲ್ಲಿ ಕ್ಲಿಕ್ ಆಗಿರುವ ಹಿಟ್ಮ್ಯಾನ್ ರೋಹಿತ್ ಶರ್ಮಾ ಟೆಸ್ಟ್ನಲ್ಲೂ ಓಪನರ್ ಆಗಿ ಕಣಕ್ಕಿಳಿಯುವ ಸಾದ್ಯತೆ ಹೆಚ್ಚಿದೆ.
ಕನ್ನಡಿಗ ಕೆ.ಎಲ್ ರಾಹುಲ್ ಓಪನರ್ ಆಗಿ ಟೆಸ್ಟ್ನಲ್ಲಿ ರನ್ ಕಲೆಹಾಕಲು ಮತ್ತೆ ಮತ್ತೆ ಎಡವುತ್ತಿದ್ದಾರೆ. ರಾಹುಲ್ ಕ್ರೀಸ್ನಲ್ಲಿ ಗಟ್ಟಿಯಾಗಿ ನೆಲೆನಿಂತು ತಂಡಕ್ಕೆ ಉತ್ತಮ ಅಡಿಪಾಯ ಹಾಕಲು ವಿಫಲರಾಗ್ತಿರುವ ಹಿನ್ನೆಲೆಯಲ್ಲಿ ಶರ್ಮಾ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಲು ಚಿಂತನೆ ನಡೆದಿದೆ ಅಂತ ಬಿಸಿಸಿಐ ಮುಖ್ಯ ಆಯ್ಕೆದಾರ ಎಂಎಸ್ಕೆ ಪ್ರಸಾದ್ ತಿಳಿಸಿದ್ದಾರೆ.
ವಿಂಡೀಸ್ ವಿರುದ್ಧದ ಎರಡು ಟೆಸ್ಟ್ ಮ್ಯಾಚ್ಗಳ ನಾಲ್ಕು ಇನ್ನಿಂಗ್ಸ್ಗಳಲ್ಲಿ ಕ್ರಮವಾಗಿ 44, 38, 13 ಮತ್ತು 6ರನ್ಗಳನ್ನು ಮಾತ್ರ ಗಳಿಸಿದ್ದರು. ಆದ್ದರಿಂದ ಉತ್ತಮ ಫಾರ್ಮ್ನಲ್ಲಿರುವ ರೋಹಿತ್ ಶರ್ಮಾ ಅವರಿಗೆ ಮಣೆ ಹಾಕುವ ಬಗ್ಗೆ ಚಿಂತನೆ ನಡೆದಿದೆ. ವಿಂಡೀಸ್ ವಿರುದ್ಧ ಟೆಸ್ಟ್ಗೆ ರೋಹಿತ್ ಆಯ್ಕೆಯಾಗಿದ್ದರೂ ಆಡುವ 11ರ ಬಳಗದಲ್ಲಿರಲಿಲ್ಲ.
ಟೆಸ್ಟ್ನಲ್ಲೂ ಹಿಟ್ಮ್ಯಾನ್ ರೋಹಿತ್ ಓಪನರ್..?
TRENDING ARTICLES