Saturday, November 23, 2024

ಕಾಂಗ್ರೆಸ್ ಗೆ ಅಂತಿಮ ಮೊಳೆ ಹೊಡೆಯುತ್ತೇವೆ : ಸಚಿವ ಆರ್. ಅಶೋಕ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಅಂತಿಮ ಮೊಳೆ ಹೊಡೆಯಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಮಾರ್ಮಿಕವಾಗಿ ನುಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ  ಕಾಂಗ್ರೆಸ್ ಇನ್ನು ಯಾವತ್ತೂ ತಲೆ ಎತ್ತದಂತೆ ಅಂತಿಮ ಮೊಳೆ ಹೊಡೆಯುವ ಚುನಾವಣೆ ಇದಾಗಲಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕತ್ವದ ಕೊರತೆಯಿಂದ ಬಳಲುತ್ತಿದೆ. ಅದು ಬಂಜರು ಭೂಮಿಯ ಪಕ್ಷ. ಮರಳುಗಾಡಿನ ಪಕ್ಷ ಅದು. ಅವರು ಒಯಸಿಸ್‍ಗೆ ಹುಡುಕಾಡುತ್ತಿದೆ. ಕಾಂಗ್ರೆಸ್ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ಟೀಕಿಸಿದ ಅವರು, 40 ನಾಯಕರು ವಿವಿಧೆಡೆ ನಮ್ಮ ರಥಯಾತ್ರೆಯಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು.

ಅಮಿತ್ ಶಾರಿಂದ 4ನೇ ರಥಕ್ಕೆ ಚಾಲನೆ

ಇದೇ 3ರಂದು ಆವಟಿಯ ಚನ್ನಕೇಶವ ದೇವಾಲಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೂಜೆ ಬಳಿಕ 4ನೇ ರಥ ಉದ್ಘಾಟನೆ ಆಗಲಿದೆ. ಬಳಿಕ ದೇವನಹಳ್ಳಿ ಶಾಲಾ ಮೈದಾನದಲ್ಲಿ 4ನೇ ರಥ ಉದ್ಘಾಟಿಸಲಿದ್ದಾರೆ. ಸಾರ್ವಜನಿಕ ಸಭೆ ಇದ್ದು, 30ರಿಂದ 40 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ಮತ್ತೆ ಡಬಲ್ ಎಂಜಿನ್ ಸರ್ಕಾರ

ಬಿಜೆಪಿ ಪಕ್ಷವು ಡಬಲ್ ಎಂಜಿನ್ ಸರ್ಕಾರ ಮರುಸ್ಥಾಪನೆಗೆ ಗೆಲ್ಲುವಂಥ ಹಲವಾರು ಸೂತ್ರಗಳನ್ನು ರೂಪಿಸಿದೆ. ಜನತೆಗೆ ಮುಟ್ಟಿರುವ ಕಾರ್ಯಕ್ರಮಗಳು ಜನರಿಗೆ ತಿಳಿಯಬೇಕೆಂದು ವಿಜಯ ಸಂಕಲ್ಪ ಯಾತ್ರೆ 4 ರಥಗಳ ಮೂಲಕ ನಡೆಯಲಿದೆ. ನನ್ನ ನೇತೃತ್ವದ ತಂಡವು 3ರಂದು ರ್ಯಾಲಿ ನಡೆಸಲಿದೆ. ಅಶ್ವತ್ಥನಾರಾಯಣ್, ಗೋಪಾಲಯ್ಯ, ಸೋಮಶೇಖರ್, ಡಾ.ಸುಧಾಕರ್, ಇನ್ನೂ ಹಲವಾರು ಎಂಎಲ್‍ಸಿಗಳು, ಲೋಕಸಭಾ ಸದಸ್ಯ ಪಿ.ಸಿ.ಮೋಹನ್, ಇವರೆಲ್ಲರೂ ನಮ್ಮ ತಂಡದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ನಮ್ಮ ತಂಡ 17 ಸಾರ್ವಜನಿಕ ಸಭೆಗಳನ್ನು ಮಾಡಲಿದೆ. 7 ಮೋರ್ಚಾಗಳ ಸಭೆಯೂ ನಡೆಯಲಿದೆ. ದಿನಾಂಕಗಳನ್ನು ನಿರ್ಧರಿಸಲಾಗಿದೆ. ಎಲ್ಲ ಕಡೆ ರೋಡ್ ಶೋ, ಸಾರ್ವಜನಿಕ ಸಭೆ ಇರುತ್ತದೆ. ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಭಾಗದಲ್ಲಿ ನಮ್ಮ ರಥದ ಮೂಲಕ ಸಂಚರಿಸುತ್ತೇವೆ ಎಂದು ಮಾಹಿತಿ ನೀಡಿದರು.

ದಾವಣಗೆರೆಯಲ್ಲಿ 25ರಂದು ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ರಥಗಳ ಸಂಚಾರದ ಸಮಾರೋಪ ನಡೆಯಲಿದೆ. ಬೃಹತ್ ರ್ಯಾಲಿ ಮೂಲಕ ಮೋದಿ ಅವರು ಪಾಂಚಜನ್ಯದ ಶಂಖನಾದ ಮಾಡಲಿದ್ದಾರೆ. ಒಂದು ವಾರದಿಂದ ತಯಾರಿ ನಡೆದಿದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES