Friday, November 22, 2024

ಶುರುವಾಯ್ತು ‘ಮೈಸೂರು-ಬೆಂಗಳೂರು ದಶಪಥ’ ಹೆದ್ದಾರಿ ಕ್ರೆಡಿಟ್ : ಸಿಂಹಗೆ ಟಾಂಗ್ ಕೊಟ್ಟ ಟಗರು

ಬೆಂಗಳೂರು : ಬೆಂಗಳೂರು-ಮೈಸೂರು ನಡುವೆ ಸುಮಾರು 8 ಸಾವಿರ ಕೋಟಿ ವೆಚ್ಚದಲ್ಲಿ ಸುಮಾರು 117 ಕಿ.ಮೀ ಉದ್ದದ ಎಕ್ಸ್​​ಪ್ರೆಸ್ ಹೈವೆ ನಿರ್ಮಿಸಲಾಗಿದೆ. ಇದೇ ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ಪ್ರೆಸ್‌ ಹೈವೇಗೆ ಚಾಲನೆ ನೀಡಲಿದ್ದಾರೆ. ಈ ನಡುವೆ ಹೆದ್ದಾರಿ ಕ್ರೆಡಿಟ್ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವೆ ಕೆಸರೆರಚಾಟ ಶುರುವಾಗಿದೆ.

ಮೈಸೂರಿನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕ್ರೆಡಿಟ್ ನಮ್ಮ ಸರ್ಕಾರಕ್ಕೇ ಸಲ್ಲಬೇಕು ಎಂದು ಸಂಸದ ಪ್ರತಾಪ್ ಸಿಂಹಗೆ ಟಾಂಗ್ ಕೊಟ್ಟಿದ್ದಾರೆ.

ಮಾರ್ಚ್ 9ರಂದು ಬೆಂಗಳೂರು-ಮೈಸೂರು ಹೆದ್ದಾರಿ ಪರಿಶೀಲನೆ ನಡೆಸುತ್ತೇನೆ. ಆ ರಸ್ತೆಯ ಕ್ರೆಡಿಟ್ ನಮ್ಮ ಸರ್ಕಾರಕ್ಕೇ ಸಲ್ಲಬೇಕು. ಪ್ರತಾಪ್ ಸಿಂಹ ಅವರದ್ದಾಗಲಿ, ಬಿಜೆಪಿ ಸರ್ಕಾರದ್ದಾಗಲಿ ಯಾವುದೇ ಪಾತ್ರ ಇಲ್ಲ. ಪ್ರತಾಪ್ ಸಿಂಹ ಅವರ ಲೋಕಸಭಾ ವ್ಯಾಪ್ತಿಗೆ ಕೆಲವು ಕಿಲೋಮೀಟರ್ ರಸ್ತೆ ಮಾತ್ರ ಸೇರುತ್ತದೆ. ಆದರೂ ನಮ್ಮದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಮತ್ತೆ ವಿವಾದ ಮೈ ಮೇಲೆ ಎಳೆದುಕೊಂಡ ಸಿ.ಟಿ ರವಿ

ವಿರೂಪಾಕ್ಷಪ್ಪ ಎಲ್ಲಿದ್ದಾರೆ ಅಂತಾ ಗೊತ್ತಿದೆ

ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಅವರು, ಅವರನ್ನು ಬಿಜೆಪಿ ಸರ್ಕಾರವೇ ರಕ್ಷಣೆ ಮಾಡುತ್ತಿದೆ. ವಿರೂಪಾಕ್ಷಪ್ಪನವರು ಎಲ್ಲಿದ್ದಾರೆ ಎಂಬುವುದು ಸರ್ಕಾರಕ್ಕೆ ಗೊತ್ತಿದೆ. ವಿರೂಪಾಕ್ಷಪ್ಪ ತಮ್ಮ ಮನೆಯಲ್ಲಿಯೇ ಓಡಾಡಿಕೊಂಡಿದ್ದಾರೆ. ಅವರನ್ನು ಬಂಧಿಸದೆ ಇವರು ನಾಟಕ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಆಗ ಯಾಕೆ ಬಂಧಿಸಲಿಲ್ಲ?

ವಿರೂಪಾಕ್ಷಪ್ಪ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲು ಬಂದಾಗಲೇ ಅವರನ್ನು ಯಾಕೆ ಬಂಧಿಸಲಿಲ್ಲ? ಈಗ ಲುಕ್‌ಔಟ್ ನೋಟಿಸ್ ಹೆಸರಿನಲ್ಲಿ ಜನರ ಗಮನ ಬೇರೆಡೆ ಸೆಳೆಯುತ್ತಿದ್ದಾರೆ ಅಷ್ಟೇ. ಭ್ರಷ್ಟಾಚಾರದ ಆರೋಪಕ್ಕೆ ಮಿಸ್ಟರ್ ಬೊಮ್ಮಾಯಿ ಅವರು ಸಾಕ್ಷಿ ಕೇಳುತ್ತಿದ್ದರು. ಈಗ ವಿರೂಪಾಕ್ಷಪ್ಪನವರು ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ ಎಂದು ಹೇಳಿದ್ದಾರೆ.

ಇವತ್ತೇ ರಾಜೀನಾಮೆ ಕೊಡುತ್ತೇನೆ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ಲೋಕಾಯುಕ್ತ ವಿಚಾರದಲ್ಲಿ ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನಾನು ಲೋಕಾಯುಕ್ತ ಬಂದ್ ಮಾಡಲಿಲ್ಲ. ನಾನು ಲೋಕಾಯುಕ್ತ ಬಂದ್ ಮಾಡಿದ್ದರೆ ಇವತ್ತೇ ರಾಜೀನಾಮೆ ಕೊಡುತ್ತೇನೆ. ನಾವು ಭ್ರಷ್ಟಾಚಾರ ನಿಗ್ರಹಕ್ಕೆ ಎಸಿಬಿ ರಚನೆ ಮಾಡಿದ್ದೆವು ಅಷ್ಟೇ. ನಾವು ಲೋಕಾಯುಕ್ತದ ಯಾವ ಅಧಿಕಾರವನ್ನೂ ಕಿತ್ತುಕೊಂಡಿಲ್ಲ. ನಮ್ಮ ಕಾಲದಲ್ಲೂ ಲೋಕಾಯುಕ್ತ ಇತ್ತು. ಎಲ್ಲಾ ಸತ್ಯ ಗೊತ್ತಿದ್ದರೂ ಬೊಮ್ಮಾಯಿ ಸುಳ್ಳು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES