Friday, November 22, 2024

ಮಾಡಾಳ್ ಮಿಸ್ಸಿಂಗ್ : ಶುರುವಾಯ್ತು ಕಾಂಗ್ರೆಸ್ ಪೋಸ್ಟರ್ ಅಭಿಯಾನ

ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಪ್ರಕರಣ ಸಂಬಂಧ ಈಗಾಗಲೇ ತನಿಖೆ ಚುರುಕುಗೊಂಡಿದೆ. ಈ ಬೆನ್ನಲ್ಲೇ ಬಿಜೆಪಿ ಸರ್ಕಾರ ಹಾಗೂ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಅಭಿಯಾನ ಆರಂಭಿಸಿದ್ದಾರೆ.

ಹೌದು, ಈ ಹಿಂದೆ ಪೇ ಸಿಎಂ ಅಭಿಯಾನ ಶುರು ಮಾಡಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದೀಗ ‘ಮಾಡಾಳ್ ಮಿಸ್ಸಿಂಗ್’ ಅಭಿಯಾನ ಪ್ರಾರಂಭ ಮಾಡಿದ್ದಾರೆ. ರಾಜ್ಯದ ಹಲವೆಡೆ ‘ಮಾಡಾಳ್ ವಿರೂಪಾಕ್ಷಪ್ಪ ಕಾಣೆಯಾಗಿದ್ದಾರೆ’ ಎಂಬ ಪೋಸ್ಟರ್ ಗಳನ್ನು ಅಂಟಿಸಿ ವ್ಯಂಗ್ಯವಾಡಿದ್ದಾರೆ.

ಆರೋಪಿ ಕಂಡ್ರೆ 100ಕ್ಕೆ ಕರೆ ಮಾಡಿ

ಇನ್ನೂ ಆರೋಪಿ ವಿರೂಪಾಕ್ಷಪ್ಪ ಮಾಡಾಳ್ ಕಂಡಲ್ಲಿ ಕೂಡಲೇ 100 ನಂಬರ್ ಗೆ ಕರೆ ಮಾಡಿ ಮಾಹಿತಿ ನೀಡಿ. ಆ ಮೂಲಕ ಲೋಕಾಯುಕ್ತ ತನಿಖೆಗೆ ಸಹಾಯ ಮಾಡಿ ಎಂದು ಪೋಸ್ಟರ್ ನಲ್ಲಿ ಕಾಂಗ್ರೆಸ್ ಟಾಂಗ್ ಕೊಟ್ಟಿದೆ. ಜೊತೆಗೆ, ಬಿಜೆಪಿ 40% ಸರ್ಕಾರ ಎಂದು ಲೇವಡಿ ಮಾಡಿದೆ.

ಇದನ್ನೂ ಓದಿ : ಅಯ್ಯೋ : ಮತ್ತೆ ವಿವಾದ ಮೈ ಮೇಲೆ ಎಳೆದುಕೊಂಡ ಸಿ.ಟಿ ರವಿ

ವಿರೂಪಾಕ್ಷಪ್ಪ ಎ1 ಆರೋಪಿ

ಲಂಚ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಎ1 ಆರೋಪಿಯಾಗಿದ್ದಾರೆ. ಮಗನ ಬಂಧನದ ಸುದ್ದಿ ಹೊರಬಂದಾಗಿನಿಂದ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದಾರೆ. ಇದರ ನಡುವೆ ಸಿಎಂ ಸೂಚನೆ ಮೇರೆಗೆ ಕೆಎಸ್‌ಡಿಎಲ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ತನಗೆ ನಿರೀಕ್ಷಣಾ ಜಾಮೀನು ನೀಡುವಂತೆ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಆ ಸಂಬಂಧ ತಕ್ಷಣ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಕೋರ್ಟ್‌ ಹೇಳಿತ್ತು.

RELATED ARTICLES

Related Articles

TRENDING ARTICLES