Saturday, November 23, 2024

ರೇಷ್ಮೆಗೂಡಿನ ಬೆಲೆ ಕುಸಿತ : ರೇಷ್ಮೆ ಬೆಳೆಗಾರರಿಗೆ ಆತಂಕ ಬೇಡ

ಬೆಂಗಳೂರು: ಕಚ್ಚಾ ರೇಷ್ಮೆ ಬೆಲೆ ದಿಢೀರ್ ಕುಸಿತದಿಂದ ರೇಷ್ಮೆ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಇದನ್ನು ಸರ್ಕಾರ ಮನಗಂಡಿದ್ದು, ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದೆ.

ರೇಷ್ಮೆ ಬೆಲೆ ದಿಢೀರ್ ಕುಸಿತದಿಂದ ರೈತರು ಆತಂಕಕ್ಕೆ ಒಳಗಾಗಬಾರದು. ಶೀಘ್ರವೇ ಸರ್ಕಾರ ಮಧ್ಯ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹೇಳಿದ್ದಾರೆ.

ಕಳೆದ ಎರಡು ವರ್ಷಗಳಿಂದ ಸ್ಥಿರವಾಗಿದ್ದ ರೇಷ್ಮೆಗೂಡಿನ ದರ ದಿಢೀರ್ ಕುಸಿತಗೊಂಡಿದೆ. ಇದರಿಂದ ರೇಷ್ಮೆ ಬೆಳೆಗಾರರು ಆತಂಕಪಡುವ ಅವಶ್ಯಕತೆ ಇಲ್ಲ. ಕೂಡಲೇ ಸರ್ಕಾರ ಮಧ್ಯೆ ಪ್ರವೇಶ ಮಾಡಲಿದೆ.

ಕಚ್ಚಾ ರೇಷ್ಮೆ ಬೆಲೆ ದಿಢೀರ್ ಕುಸಿತ ತಾತ್ಕಾಲಿಕ, ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಕಾರಣದಿಂದಲೂ ಬೆಲೆ ಕಡಿಮೆಯಾಗಿರಬಹುದು. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ‌ ಎಂದು ತಿಳಿಸಿದ್ದಾರೆ.

ಸದಾ ರೇಷ್ಮೆ ಬೆಳೆಗಾರರ ಪರ

ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿ ವತಿಯಿಂದ ಕಚ್ಚಾ ರೇಷ್ಮೆ ಖರೀದಿ ಮಾಡಲು ತುರ್ತಾಗಿ ಕ್ರಮವಹಿಸಲಾಗುವುದು. ಆದ್ದರಿಂದ ರೇಷ್ಮೆ ಬೆಳೆಗಾರರು ಆತಂಕಪಡಬೇಕಿಲ್ಲ. ಸರ್ಕಾರ ಸದಾ ಕಾಲ ರೇಷ್ಮೆ ಬೆಳೆಗಾರರ ಪರವಾಗಿದೆ. ಮತ್ತೆ ರೇಷ್ಮೆಗೂಡಿನ ಬೆಲೆ ಉತ್ತಮ ಸ್ಥಿತಿಗೆ ತಲುಪಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಚಿವ ಡಾ‌.ನಾರಾಯಣಗೌಡ ಹೇಳಿದ್ದಾರೆ.

RELATED ARTICLES

Related Articles

TRENDING ARTICLES