Friday, November 22, 2024

ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾರೆಂಟಿ ಅವಧಿ ಮುಗಿದಿದೆ : ಸಿ.ಟಿ ರವಿ ಲೇವಡಿ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಗ್ಯಾರಂಟಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ವಾರೆಂಟಿ ಅವಧಿ ಮುಗಿದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಲೇವಡಿ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರಂಟಿ ಕಾರ್ಡ್ ನೀಡಿ ಏನು ಪ್ರಯೋಜನವಾಗುತ್ತದೆ. ಕಾಂಗ್ರೆಸ್ ಗ್ಯಾರಂಟಿ ಅನ್ನೋದು ಒಂದು ಫಾಲ್ಸ್ ಕಾರ್ಡ್ ಆಗಿದೆ. ಈ ಫಾಲ್ಸ್ ಕಾರ್ಡ್ ಬದಲಾಗಿ ನಾವು ಜನರಿಗೆ ಅಭಿವೃದ್ಧಿ ಕಾರ್ಡ್ ನೀಡುತ್ತೇವೆ ಎಂದು ಟೀಕಿಸಿದ್ದಾರೆ.

ಮಂಡ್ಯದಲ್ಲಿ ಉರಿಗೌಡ ಹಾಗೂ ನಂಜೆಗೌಡ ಮಹಾದ್ವಾರ ತೆರವು ಮಾಡಿದ ವಿಚಾರವಾಗಿ ಮಾತನಾಡಿ, ಮಹಾದ್ವಾರ ತೆರವುಮಾಡಿದ್ದು, ಅಕ್ಷಮ್ಯ ಅಪರಾಧವಾಗಿದೆ. ದ್ವಾರ ಹಾಕಿದ್ದು ಸರಿಯಾಗಿದೆ. ಆದರೆ, ತೆರವು ಮಾಡಿದ್ದು ಯಾಕೆ ಗೊತ್ತಿಲ್ಲ. ಮುಂದಿನ ದಿನಗಳಲ್ಲಿ ಶಾಶ್ವತ ದ್ವಾರ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೆಂಗಳೂರು-ಮೈಸೂರು ರಸ್ತೆ ಕ್ರೆಡಿಟ್ ಯಾರಿಗೆ? : ಸಿಎಂ ಕೊಟ್ಟ ಉತ್ತರ ಏನು?

ಇನ್ನೂ, ಮಾಜಿ ಸಚಿವ ಬಿ.ಸಿ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ ಸಿ.ಟಿ ರವಿ ಕಿಡಿಕಾರಿದ್ದಾರೆ. ಹಿಂದೆ ಕರೆ ತುಂಬುವ ಯೋಜನೆಯನ್ನು ನಿಮ್ಮದೆ ಸರ್ಕಾರ ತಿರಸ್ಕಾರ ಮಾಡಿತ್ತು . ಬಿಜೆಪಿ ಸರ್ಕಾರ ಕೆರೆ ತುಂಬುವ ಯೋಜನೆಯನ್ನು ಜಾರಿಗೆ ತಂದಿದೆ. ಮಲ್ಲಿಕಾರ್ಜುನ ಖರ್ಗೆ ನೀರಾವರಿ ಸಚಿವರಾಗಿದ್ದಾಗ ಕೆರೆ ತುಂಬುವಯೋಜನೆಗೆ ಅನುಮತಿ ನೀಡಿರಲಿಲ್ಲ. ಇದೀಗ ನೀವು ಅದೇ ಯೋಜನೆಯ ಹೆಸರಿನಲ್ಲಿ ಫೋಟೋ ಹಾಕಿಕೊಳ್ಳು ತ್ತಿರಿ ಎಂದು ಆಕ್ರೋಶ ಹೊರಹಾಕಿದ್ದಾರೆ.

RELATED ARTICLES

Related Articles

TRENDING ARTICLES