ಬೆಂಗಳೂರು : 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿದ್ದ ನಿರ್ಧಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಅಸ್ತು ಎಂದಿದೆ.
ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಜಿ. ನರೇಂದರ್ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಪೀಠವು, 5 ಮತ್ತು 8ನೇ ತರಗತಿ ಮಕ್ಕಳ ಬುದ್ಧಿ ಮತ್ತೆ ಪರೀಕ್ಷೆಗೆ ಶಿಕ್ಷಣ ಕಾಯ್ದೆಯಡಿ ಬೋರ್ಡ್ ಪರೀಕ್ಷೆ ನಡೆಸಲು ಯಾವುದೇ ನಿರ್ಬಂಧವಿಲ್ಲ, ಪರೀಕ್ಷೆ ನಡೆಸಬಹುದು ಎಂದು ಹೇಳಿದೆ.
ಆದರೆ, ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವಂತಿಲ್ಲ. ಪಠ್ಯಕ್ರಮ ಹೊರತುಪಡಿಸಿ ಬೇರೆ ಪ್ರಶ್ನೆಗಳನ್ನು (ಪ್ರಶ್ನೆ ಪತ್ರಿಕೆ) ಕೇಳುವಂತಿಲ್ಲ ಎಂದೂ ತೀರ್ಪಿನಲ್ಲಿ ತಿಳಿಸಿದೆ.
ಸಾರ್ವಜನಿಕವಾಗಿ ಫಲಿತಾಂಶ ಪ್ರಕಟಿಸುವಂತಿಲ್ಲ
ಇನ್ನೂ ಫಲಿತಾಂಶದ ವಿಷಯಕ್ಕೆ ಬಂದರೆ, ಫಲಿತಾಂಶವನ್ನು ಶಾಲೆಗೆ ತಲುಪಿಸಬೇಕೇ ಹೊರತು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ ಎಂದು ನ್ಯಾಯಾಲಯವು ಸೂಚಿಸಿದೆ. ಜೊತೆಗೆ, ರಾಜ್ಯ ಸರ್ಕಾರಕ್ಕೆ ಕೆಲವು ನಿರ್ಬಂಧಗಳನ್ನು ವಿಧಿಸಿದೆ.
ಇದನ್ನೂ ಓದಿ : ಹಿಜಾಬ್ ಧರಿಸಿ ಪರೀಕ್ಷೆಗೆ ಬಂದ ವಿದ್ಯಾರ್ಥಿನಿ!
ಪೋಷಕರ ಸಂಘಟನೆಗೆ ಹಿನ್ನಡೆ
ಪೋಷಕರ ಸಂಘಟನೆ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದನ್ನು ವಿರೋಧಿಸಿತ್ತು. ನ್ಯಾಯಾಲಯದ ಮೊರೆ ಹೋಗಿದ್ದ ಪೋಷಕರ ಮನವಿಗೆ ಸ್ಪಂದಿಸಿದ್ದ ನ್ಯಾಯಾಲಯ ಆದೇಶಕ್ಕೆ ತಡೆ ನೀಡಿತ್ತು. ಇದೀಗ, ಸರ್ಕಾರದ ನಿರ್ಧಾರವನ್ನು ವಿಭಾಗೀಯ ಪೀಠ ಪುರಸ್ಕರಿಸಿದೆ.
ಒಟ್ಟಾರೆ, ಮಾರ್ಚ್ 27ರಿಂದ ಪರೀಕ್ಷೆಗಳು ಆರಂಭವಾಗಲಿದ್ದು ಶಿಕ್ಷಣ ಇಲಾಖೆ ರೀತಿಯ ಸಿದ್ಧತೆಗೆ ಮುಂದಾಗಿದೆ.