ಬೆಂಗಳೂರು : ವಿಧಾನಸಭಾ ಚುನಾವಣೆಯನ್ನೇ ಗುರಿಯಾಗಿಸಿಕೊಂಡು ಕಾಂಗ್ರೆಸ್ ಪಕ್ಷ ಯುವ ಸಬಲೀಕರಣಕ್ಕಾಗಿ ನಾಲ್ಕನೇ ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿದೆ.
ಬೆಳಗಾವಿಯಲ್ಲಿ ಇಂದು ಹಮ್ಮಿಕೊಂಡಿದ್ದ ಯುವ ಕ್ರಾಂತಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ನಾಲ್ಕನೇ ಗ್ಯಾರೆಂಟಿ ಯೋಜನೆ ‘ಯುವ ನಿಧಿ’ಯನ್ನು ಘೋಷಿಸಿದರು.
ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. ಅಂತೆಯೇ ಡಿಪ್ಲೊಮಾ ಪದವೀಧರರಿಗೆ ಪ್ರತಿ ತಿಂಗಳು 1,500 ರೂ. ನಿರುದ್ಯೋಗ ಭತ್ಯೆ ನಿಡುವ ಯೊಜನೆ ಇದಾಗಿದೆ.
ಸಮಾರಂಭದಲ್ಲಿ ಈ ಕುರಿತು ಮಾತನಾಡಿರುವ ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಖಾಲಿ ಇರುವ 2.5 ಲಕ್ಷ ಹುದ್ದೆಗಳನ್ನು ಒಂದೂವರೆ ವರ್ಷದಲ್ಲೇ ಭರ್ತಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.