ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯುಗಾದಿ ಹಬ್ಬದ ದಿನದಂದೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನು ಕೊಟ್ಟಿದ್ದಾರೆ.
ಹೌದು, ರಾಜ್ಯದ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಬೊಮ್ಮಾಯಿ ದೊಡ್ಡ ಘೋಷಣೆ ಮಾಡಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಪಿಯು, ಡಿಗ್ರಿ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಇನ್ನು ಮುಂದೆ ಶುಲ್ಕವಿಲ್ಲದೇ ಪ್ರವೇಶ ಪಡೆಯಬಹುದು. ಆರ್ಥಿಕ ಅಡಚಣೆಯಿಂದ ವಿದ್ಯಾಭ್ಯಾಸ ಸ್ಥಗಿತಗೊಳಿಸಬಾರದು ಎಂಬ ಹಿತದೃಷ್ಠಿಯಿಂದ ಈ ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ನಾಡಿನ ಜನತೆಗೆ ಯುಗಾದಿ ಶುಭಾಶಯ
ಸಿಎಂ ಬೊಮ್ಮಾಯಿ ಅವರು ನಾಡಿನ ಜನತೆಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ‘ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಹಬ್ಬವು ನಿಮ್ಮೆಲ್ಲರ ಬಾಳಿನಲ್ಲಿ ಹೊಸ ಭರವಸೆಯನ್ನು ನೀಡಿ, ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ಮೂಡಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.