ಬೆಂಗಳೂರು : ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದಿಲ್ಲ. ದೇಶದಲ್ಲಿ ಕಾನೂನು ವ್ಯವಸ್ಥೆಯಿದ್ದು ಕಾನೂನಿನ ಪ್ರಕಾರ ಎಲ್ಲಾ ನಡೆಯಲಿದೆ ಎಂದು ತಿಳಿಸಿದ್ದಾರೆ.
ಹಾದಿಬೀದಿಯಲ್ಲಿ ವೈಯಕ್ತಿಕ ನಿಂಧನೆ
ರಾಹುಲ್ ಗಾಂಧಿಗೆ ಏನು ಮಾತನಾಡಿದರೂ ನಡೆಯುತ್ತದೆ ಎನ್ನುವ ಭಾವನೆ ಇದೆ . ಅವರಿಗೆ ಸರಿಪಡಿಸಿಕೊಳ್ಳಲು ಅವಕಾಶವಿತ್ತು. ಆದರೆ,ಅವರು ಸರಿಪಡಿಸಿಕೊಳ್ಳಲಿಲ್ಲ. ಪ್ರತಿಪಕ್ಷದವರನ್ನು ಚುನಾವಣೆಯಲ್ಲಿ ಸೋಲಿಸಬೇಕು ಅಥವಾ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು. ಅದು ಬಿಟ್ಟು ಹಾದಿಬೀದಿಯಲ್ಲಿ ವೈಯಕ್ತಿಕ ನಿಂಧನೆ ಮಾಡಿ ಮಾತನಾಡಿದರೆ, ಖಂಡಿತವಾಗಿಯೂ ಅದಕ್ಕೆ ಕಾನೂನು ಇದೆ ಎಂದು ಸಿಎಂ ಕುಟುಕಿದ್ದಾರೆ.
ರಾಹುಲ್ ಗಾಂಧಿ ಕೇವಲ ವ್ಯಕ್ತಿಯ ವಿರುದ್ಧ ಅಲ್ಲ ಒಂದು ವರ್ಗದ ವಿರುದ್ಧ ಮಾತನಾಡಿದ್ದಾರೆ. ಬಹಳ ಜನರಿಗೆ ಇದರಿಂದ ನೋವಾಗಿದೆ. ಅವರಲ್ಲರೂ ಪ್ರಕರಣ ದಾಖಲಿಸಿ ನ್ಯಾಯಾಲಯ ತೀರ್ಪು ನೀಡಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಕೈ ಪಟ್ಟಿಯಲ್ಲಿ ಹೊಸತನವೇನಿದೆ?
ಕಾಂಗ್ರೆಸ್ ಪಕ್ಷದಿಂದ ಮೊದಲ ಪಟ್ಟಿ ಬಿಡುಗಡೆಯಾಗಿರುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ. ಅದರಲ್ಲಿ ಹೊಸತನವೇನಿಲ್ಲಾ. ಬಿಜೆಪಿ ಪಟ್ಟಿ ಬಿಡುಗಡೆ ಕುರಿತು ಕಾದು ನೋಡಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.