Thursday, September 19, 2024

ರಾಜ್ಯದ 5 ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ ಏನು?

ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾರ್ಚ್​​​ 26ರಿಂದ 30ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್​​ 26 ಮತ್ತು 27ರಂದು ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ಮಂಡ್ಯ ಮತ್ತು ರಾಮನಗರ ಜಲ್ಲೆಗಳಲ್ಲಿ ಮಳೆಯಾಗಲಿದೆ.

ಮಾರ್ಚ್​​​ 30ರಂದು ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಮಂಡ್ಯ ಮತ್ತು ರಾಮನಗರದಲ್ಲಿ ವರುಣನ ಆಗಮನವಾಗಲಿದೆ. ಮಾರ್ಚ್​ 31 ರಂದು ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಿಸಿಲಿನ ತೀವ್ರತೆ ಭಾರೀ ಏರಿಕೆ

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಜಾಸ್ತಿಯಾಗುತ್ತಿದ್ದು ಬೆಂಗಳೂರಿನಲ್ಲಿ ಈ ವರ್ಷದಲ್ಲಿ ಮೊದಲ ಬಾರಿಗೆ 34.5ಡಿಗ್ರಿ ಸೆಲ್ಶಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಕಲಬುರಗಿ, ಮೈಸೂರು, ರಾಯಚೂರು, ಮಂಗಳೂರು, ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಶಿಯಸ್ ದಾಟಿದೆ.

ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ನಿಗದಿಗಿಂತ 3 ಡಿ.ಸೆಲ್ಶಿಯಸ್‌ನಷ್ಟು ತಾಪಮಾನ ಏರಿಕೆಯಾಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಬಿಸಿಲಿನ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

RELATED ARTICLES

Related Articles

TRENDING ARTICLES