Saturday, May 4, 2024

ನೀತಿ ಸಂಹಿತೆ ಉಲ್ಲಂಘಿಸಿದ್ರಾ ಸಿದ್ದರಾಮಯ್ಯ?

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆಯಾದ ತತ್‌ಕ್ಷಣದಿಂದ ನೀತಿ ಸಂಹಿತೆ ಜಾರಿಯಾಗಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಆದರೆ, ಸಿದ್ದರಾಮಯ್ಯ ಇಂದೇ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ.

ಹೌದು, ಮಾಜಿ ಸಿಎಂ ಸಿದ್ದರಾಮಯ್ಯ ಮೊದಲ ದಿನವೇ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುವ ಸಂದರ್ಭದಲ್ಲಿ ವಾಲಗದವರಿಗೆ ಸಿದ್ದರಾಮಯ್ಯ 1 ಸಾವಿರ ರೂಪಾಯಿ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ರಾಜಕೀಯ ದುರುದ್ದೇಶ

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿದ್ದರಾಮಯ್ಯ, ಒಳ ಮೀಸಲಾತಿ ವಿಚಾರಕ್ಕೆ ನಮ್ಮ ಬದ್ಧತೆ ಇದೆ, ಆದರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಮಾಡಿ ಎಂದು ಸಲಹೆ ಕೊಟ್ಟಿದ್ದೆವು. ಬಿಜೆಪಿಯವರು ಚುನಾವಣೆ ವೇಳೆ ಯಾಕೆ ತರಾತುರಿಯಲ್ಲಿ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ರಾಜಕೀಯ ದುರುದ್ದೇಶದಿಂದ ಒಳ ಮೀಸಲಾತಿ ಮಾಡಿದ್ದಾರೆ. ನಾಲ್ಕು ವರ್ಷದಿಂದ ಯಾಕೆ ಸುಮ್ಮನಿದ್ದು ಈಗ ಯಾಕೆ ಮಾಡಿದ್ದಾರೆ, ಇದು ರಾಜಕೀಯ ದುರುದ್ದೇಶ ಅಲ್ವಾ? ಅಧಿಕಾರಕ್ಕೆ ಬಂದ ಕೂಡಲೇ ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಸದಾಶಿವ ಆಯೋಗ ವರದಿ ಕೊರಚ, ಬೋವಿ, ಲಂಬಾಣಿ, ಕೊರಮ ಸಮುದಾಯಕ್ಕೆ ಇರೋದು, ಅದನ್ನು ಮಾಡುವಾಗ ಬಂಜಾರ ಸಮುದಾಯ ವಿರೋಧ ಮಾಡುತ್ತಿದ್ದರು. ಇವರೆನ್ನೆಲ್ಲ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಹೇಳಿದ್ದೆವು, ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ಈ ರೀತಿ ಆಗಿದೆ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES