ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೆಲ ರಾಜಕೀಯ ನಾಯಕರು ಇದರ ಅರಿವಿಲ್ಲದೆಯೇ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿದ್ದಾರೆ.
ಹೌದು, ನೀತಿಸಂಹಿತೆ ಉಲ್ಲಂಘಿಸಿ ಸಭೆ ನಡೆಸಿದ್ದ ಹೊನ್ನಾಳಿ ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನೀತಿ ಸಂಹಿತೆ ಉಲ್ಲಂಘಿಸಿ ಸಭೆ ನಡೆಸಿದ್ದಕ್ಕೆ ಚುನಾವಣಾಧಿಕಾರಿ ಎಫ್ಐಆರ್ ದಾಖಲಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಗುರುರಾಜ ಕಲ್ಯಾಣ ಮಂಟಪದಲ್ಲಿ ರೇಣುಕಾಚಾರ್ಯ ಕ್ಷೇತ್ರದ ಕಾರ್ಯಕರ್ತರ ಜೊತೆ ನಿಯಮಬಾಹಿರವಾಗಿ ಸಭೆ ನಡೆಸಿದ್ದರು.
ಇದನ್ನೂ ಓದಿ : ‘ಪವರ್ ಬಲೆ’ಗೆ ಬಿದ್ದ ಅರಸೀಕೆರೆ ‘ತೋಳ’ : ‘ಕೋತಿ ತಿಂದು ಮೇಕೆ ಮೂತಿಗೆ ಒರೆಸೋದು ಅಂದ್ರೆ ಇದೇ!
ಶಾಸಕರು ಸಭೆ ನಡೆಸುತ್ತಿದ್ದ ವೇಳೆ ಚುನಾವಣಾ ಅಧಿಕಾರಿಗಳು ಕಲ್ಯಾಣ ಮಂಟಪದ ಮೇಲೆ ದಾಳಿ ಮಾಡಿದ್ದರು. ರೇಣುಕಾಚಾರ್ಯ ಸ್ಟೇಜ್ ಮೇಲೆ ಮಾತನಾಡುತ್ತಿದ್ದ ವೇಳೆಯೇ ಅಧಿಕಾರಿಗಳು ಮೈಕ್ ಕಸಿದುಕೊಂಡು ಕಾರ್ಯಕ್ರಮ ನಿಲ್ಲಿಸಿದ್ದರು. ಈ ಸಂಬಂಧ ಇದೀಗ ರೇಣುಕಾಚಾರ್ಯ ವಿರುದ್ಧ ದೂರು ದಾಖಲಾಗಿದೆ.
ಶಾಸಕ ರೇಣುಕಾಚಾರ್ಯ, ಸಂತೋಷ್ ಎಂಬುವವರ ವಿರುದ್ಧ ದೂರು ದಾಖಲಿಸಲಾಗಿದೆ. ಕೋರ್ಟ್ ಅನುಮತಿ ಪಡೆದು ಹೈಗ್ರೌಂಡ್ಸ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಚುನಾವಣೆ ಹೊತ್ತಿನಲ್ಲೇ ಶಾಸಕ ರೇಣುಕಾಚಾರ್ಯ ಸಂಕಷ್ಟಕ್ಕೆ ಒಳಗಾಗಿದ್ದಾರೆ.