Friday, November 22, 2024

ಕಾಂಗ್ರೆಸ್ ಗೆ ಮತ್ತೊಂದು ಶಾಕ್ : ಬಿಜೆಪಿಗೆ ಸೇರ್ಪಡೆಯಾದ ಡಿಕೆಶಿ ಆಪ್ತ

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆ ಹಾಗೂ ಕಾಂಗ್ರೆಸ್ ಟಿಕೆಟ್ ಘೋಷಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಗೆ ಶಾಕ್ ಮೇಕೆ ಶಾಕ್ ಎದುರಾಗಿದೆ. ಟಿಕೆಟ್ ವಂಚಿತ ನಾಯಕರು ಪಕ್ಷ ತೊರೆದು ಬೇರೆ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ.

ಕಲಘಟಗಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸಂತೋಷ್ ಲಾಡ್‌ಗೆ ಕಾಂಗ್ರೆಸ್‌ ಟಿಕೆಟ್ ನೀಡಿರುವುದರಿಂದ ಅಸಮಾಧಾನಗೊಂಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಎಂಎಲ್​​ಸಿ ನಾಗರಾಜ್ ಛಬ್ಬಿ ಅವರು ಕಾಂಗ್ರೆಸ್ ತೆರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡನಿಗೆ ಜನಾರ್ಧನ ರೆಡ್ಡಿ ಗಾಳ

ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ದೆಹಲಿಯಲ್ಲಿರುವ ನಿವಾಸದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಗೋವಿಂದ ಕಾರಜೋಳ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ರಾಜ್ಯ ವಿಧಾನ ಸಭಾ ಚುನಾವಣೆಗೆ ಕೇವಲ ಒಂದು ತಿಂಗಳಷ್ಟೇ ಬಾಕಿ ಇದೆ. ಆದರೆ ಆರು ತಿಂಗಳ ಹಿಂದೆಯೇ ಧಾರವಾಡ ಜಿಲ್ಲೆಯ ಕರಘಟಗಿ ತಾಲೂಕಿನ ಕಾಂಗ್ರೆಸ್ ಟಿಕೆಟ್​ ಗಾಗಿ ಸಂತೋಷ್​​ ಲಾಡ್ ಮತ್ತು ನಾಗರಾಜ ಛಬ್ಬಿ ನಡುವೆ ಭಾರೀ ಟಿಕೆಟ್ ಫೈಟ್ ಆರಂಭಗೊಂಡಿತ್ತು. ಇಬ್ಬರು ನಾಯಕರ ನಡುವೆ ತ್ಯಾಗ ವಾದ ಪ್ರತಿವಾದ‌ ನಡೆಯುತ್ತಿತ್ತು. ಸಿದ್ದು-ಡಿಕೆಶಿ ಬಣ ಪಡಿದಾಟ ಕಾಂಗ್ರೆಸ್​ ಪಕ್ಷಕ್ಕೆ ತಲೆ ನೋವಾಗಿ ಪರಿಣಮಿಸಿತ್ತು.

ಬಿಜೆಪಿ ತತ್ವ, ಸಿದ್ಧಾಂತ ಒಪ್ಪಿ ಸೇರ್ಪಡೆ

ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಶ್ರೀ ನಾಗರಾಜ್ ಛಬ್ಬಿ ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಪಕ್ಷ ಸೇರ್ಪಡೆಯಾದರು. ಅವರಿಗೆ ಬಿಜೆಪಿ ಬಾವುಟವನ್ನು ನೀಡುವ ಮೂಲಕ ಪಕ್ಷಕ್ಕೆ ಬರಮಾಡಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES