ಬೆಂಗಳೂರು : ಚುನಾವಣೆ ದಿನಾಂಕ ಘೋಷಣೆಯಾದರೂ ಇನ್ನೂ ಕಗ್ಗಂಟಾಗಿರುವ ಬಿಜೆಪಿ ಅಭ್ಯರ್ಥಿಗಳ ಟಿಕೆಟ್ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಗ್ ಅಪ್ಡೇಟ್ ನೀಡಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಿಇಸಿ ಸಭೆಯಲ್ಲಿ ಗಂಭೀರ ಚರ್ಚೆಯಾಗಿದೆ. ಅಭ್ಯರ್ಥಿಗಳ ಪಟ್ಟಿಯನ್ನು ನಾಳೆ ಅಥವಾ ನಾಡಿದ್ದು ಬಿಡುಗಡೆ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನೂ ಸಿಇಸಿ ಸಭೆ ಬಳಿಕ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದ್ದು, ನಾಳೆ ದೊಡ್ಡ ಮಟ್ಟದ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಪ್ರಧಾನ ಮಂತ್ರಿಗಳಾದ ಶ್ರೀ @narendramodi ಅವರು ಹಾಗೂ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಅವರ ನೇತೃತ್ವದಲ್ಲಿ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಕೇಂದ್ರೀಯ ಚುನಾವಣಾ ಸಮಿತಿ ಸಭೆ.#BJPYeBharavase pic.twitter.com/0uWKjtzY6H
— BJP Karnataka (@BJP4Karnataka) April 9, 2023
ಇದನ್ನೂ ಓದಿ : ಬಿಜೆಪಿಯ 25 ಶಾಸಕರು, ಸಚಿವರಿಗೆ ಟಿಕೆಟ್ ಮಿಸ್ : ಲೀಸ್ಟ್ ನಲ್ಲಿ ಯಾರೆಲ್ಲ ಇದ್ದಾರೆ ಗೊತ್ತಾ?
ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ನೇತೃತ್ವದಲ್ಲಿ ಇಂದು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಇನ್ನಿತರ ನಾಯಕರು ಭಾಗವಹಿಸಿದ್ದರು.
ಟಿಕೆಟ್ ಗಿಟ್ಟಿಸುವಲ್ಲಿ ಈಶ್ವರಪ್ಪ ಯಶಸ್ವಿ
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ ಅಥವಾ ನಾಡಿದ್ದು ರಿಲೀಸ್ ಆಗಲಿದ್ದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಸಿಎಂ ಬೊಮ್ಮಾಯಿ ಶಿಗ್ಗಾಂವಿ ಹಾಗೂ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಶಿಕಾರಿಪುರದಿಂದ ಕಣಕ್ಕೆ ಇಳಿಯುವುದು ಬಹುತೇಕ ಖಚಿತ ಎನ್ನಲಾಗಿದೆ.
Glimpses from Central Election Committee meeting being held at party's headquarters in New Delhi. pic.twitter.com/1FxJHmZUdK
— BJP (@BJP4India) April 9, 2023
ಸುಳ್ಳಿನ ಕಂತೆಗೆ ಪವರ್ ತೆರೆ
ಇವತ್ತೇ ಟಿಕೆಟ್ ರಿಲೀಸ್ ಎಂಬ ಸುಳ್ಳಿನ ಕಂತೆಗೆ ಪವರ್ ಟಿವಿ ತೆರೆ ಎಳೆದಿದೆ. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ ಪವರ್ ಟಿವಿ, ಆಧಾರರಹಿತ ನಕಲಿ ಪಟ್ಟಿಗೆ ಬ್ರೇಕ್ ಹಾಕಿದೆ. ನಾಳೆ ಬಿಜೆಪಿ ಪಟ್ಟಿ ಎಂದು ಸ್ಪಷ್ಟ ಸುದ್ದಿ ಪ್ರಸಾರ ಮಾಡಿದೆ. ಇದಕ್ಕೆ ಪೂರಕವೆಂಬಂತೆ ನಾಳೆಯೇ ಬಿಜೆಪಿ ಲಿಸ್ಟ್ ರಿಲೀಸ್ ಎಂದು ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.